ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಸಾಮಾಜಿಕ ಹರಡುವಿಕೆಯೂ ಆರಂಭಗೊಂಡಿದೆ. ಈ ಹಿನ್ನೆಲೆಯ ಜುಲೈ 17ರಿಂದ 31ರ ತನಕ ಕಾಸರಗೋಡು ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಗುರುವಾರ ಸಂಜೆ ಆದೇಶ ಹೊರಡಿಸಿದ್ದಾರೆ.
ಆದ್ದರಿಂದ ಜುಲೈ 17ರಿಂದ 31ರ ವರೆಗೆ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳು ಜಿಲ್ಲೆಯಲ್ಲಿ ಎಲ್ಲಿಯೂ ಸಂಚರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಕೋವಿಡ್ ಸಂಪರ್ಕದ ಹರಡುವಿಕೆಯ ಹೆಚ್ಚಳವನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ನಗರ ಪ್ರದೇಶಗಳಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು , ಜಿಲ್ಲೆಯ ಎಲ್ಲ ಜನರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಹಿತ ಗರಿಷ್ಠ ಜಾಗ್ರತೆ ವಹಿಸುವುದು ಇದಕ್ಕಿರುವ ಪರಿಹಾರ ಎಂಬುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.