Thursday, August 11, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ 10 ಕೊರೋನಾ ಸೋಂಕು ದೃಢ : ಮತ್ತೆ ಜನರಿಗೆ ಬಿಗ್ ಶಾಕ್!

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಬರೋಬ್ಬರಿ 10 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಖಚಿತಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಮತ್ತೆ ಆತಂಕ ಮನೆಮಾಡಿದೆ. ಇದರಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಕಳೆದ ಸೋಮವಾರ 4 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡ ಬಳಿಕ 2 ದಿನ ಜಿಲ್ಲೆಯಲ್ಲಿ ಒಂದೇ ಒಂದು ಪ್ರಕರಣ ದಾಖಲಾಗಿರಲಿಲ್ಲ.
ಈ ಮಧ್ಯೆ ಕೇರಳದಲ್ಲಿ ಗುರುವಾರ ಒಟ್ಟು 26 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಸರಗೋಡು 10, ಮಲಪ್ಪುರಂ 5, ವಯನಾಡು ಮತ್ತು ಪಾಲಕ್ಕಾಡು ತಲಾ 3, ಕಣ್ಣೂರು 2, ಕೋಝಿಕ್ಕೋಡು, ಇಡುಕ್ಕಿ , ಪತ್ತನಂತಿಟ್ಟ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇದೇ ವೇಳೆ ಕಾಸರಗೋಡು ಜಿಲ್ಲೆಯಲ್ಲಿ ಜನರು ಮತ್ತೆ ಭಯದಿಂದಲೇ ಬದುಕುವಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss