ಕಾಸರಗೋಡು| ಪಶ್ಚಿಮ ಬಂಗಾಳದಲ್ಲಿ ತೀವ್ರಗೊಂಡ ಅಂಫಾನ್ ಚಂಡಮಾರುತ : ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ

0
259

ಕಾಸರಗೋಡು: ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತದ ಪ್ರಭಾವ ತೀವ್ರಗೊಂಡಿದ್ದು, ಭಾರಿ ಗಾಳಿ ಹಾಗೂ ಮಳೆಯಾಗುತ್ತಿದೆ. ಈ ಚಂಡಮಾರುತದ ಹಿನ್ನೆಲೆಯಲ್ಲಿ ಮೇ ತಿಂಗಳ ಅಂತ್ಯಕ್ಕೆ ಕೇರಳದ ತಿರುವನಂತಪುರ ಪ್ರವೇಶ ಮಾಡಬೇಕಾಗಿದ್ದ ಮುಂಗಾರು ಮಾರುತವು ವಿಳಂಬಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತ ಭೂಮಿಗೆ ಅಪ್ಪಳಿಸಲು ಆರಂಭವಾಗಿದೆ ಎಂದು ಉಲ್ಲೇಖಿಸಲಾಗಿದೆ. ಪರಿಣಾಮವಾಗಿ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಭಾರಿ ಮಳೆಯಾಗುತ್ತಿದೆ.
ಅಂಫಾನ್ ಚಂಡಮಾರುತದಿಂದಾಗಿ ಮುಂಗಾರು ಮಳೆ ಕೇರಳ ಪ್ರವೇಶಿಸುವುದು ವಿಳಂಬವಾಗುವ ಸಾಧ್ಯತೆ ಹೆಚ್ಚು ಎಂದು ಹವಾಮಾನ ಇಲಾಖೆ ಹೇಳಿದೆ.
ಇದೇ ವೇಳೆ ಜೂನ್ 5ರ ವೇಳೆಗೆ ಮುಂಗಾರು ಕೇರಳ ಪ್ರವೇಶಿಸುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದೆ.

LEAVE A REPLY

Please enter your comment!
Please enter your name here