Thursday, August 18, 2022

Latest Posts

ಕಾಸರಗೋಡು ಸಹಿತ ಉತ್ತರ ಕೇರಳದಲ್ಲಿ ಧಾರಾಕಾರ ಮಳೆ: ಭಾರೀ ಬಿರುಗಾಳಿ ಸಾಧ್ಯತೆ

ಕಾಸರಗೋಡು: ಬಂಗಾಳಕೊಲ್ಲಿಯ ಆಳ ಸಮುದ್ರದಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತದ ಪರಿಣಾಮವಾಗಿ ಉತ್ತರ ಕೇರಳದಲ್ಲಿ ವಿಪರೀತ ಮಳೆ ಸುರಿಯುತ್ತಿದೆ.
ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದು , ಶನಿವಾರವೂ ಪೂರ್ತಿ ಮಳೆಯಾಗಿದೆ. ಅಲ್ಲದೆ ಮುಂದಿನ ಮೂರು ದಿನಗಳ ಕಾಲ ಬಿರುಸಿನ ಮಳೆ ಸುರಿಯಲಿದೆ ಎಂದು ತಿರುವನಂತಪುರ ಹವಾಮಾನ ಇಲಾಖೆಯು ತಿಳಿಸಿದೆ.
ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ವಯನಾಡು ಜಿಲ್ಲೆಗಳಲ್ಲಿ ಬಿರುಸಿನ ಮಳೆ ಮುಂದುವರಿಯುತ್ತಿದೆ. ಕಾಸರಗೋಡು ಜಿಲ್ಲೆಯೂ ಸೇರಿದಂತೆ ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ವ್ಯಾಪಕ ಕೃಷಿ ನಾಶನಷ್ಟ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮುಂದುವರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಹಾಗೂ ವಿವಿಧ ಜಲಾಶಯಗಳ ಆಸುಪಾಸುಗಳಲ್ಲಿ ನೀರು ತುಂಬಿಕೊಂಡಿದೆ. ಜಿಲ್ಲೆಯಲ್ಲಿ ಮಳೆ ಇನ್ನೂ ಮುಂದುವರಿಯಲಿದ್ದು , ಜೊತೆಗೆ ಭಾರೀ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸೆ.20ರಂದು ಜಿಲ್ಲೆಯಲ್ಲಿ ವಿದ್ಯುತ್ ಮೊಟಕು
ಕಾಸರಗೋಡು ಜಿಲ್ಲೆಯಲ್ಲಿ ಸೆ.20 ರಂದು ವಿದ್ಯುತ್ ಪೂರೈಕೆ ಆಂಶಿಕವಾಗಿ ಮೊಟಕುಗೊಳ್ಳಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅರಿಕ್ಕೋಡ್ 220 ಕೆವಿ ಲೈನ್ ದುರಸ್ತಿ ನಡೆಯುತ್ತಿರುವುದು ವಿದ್ಯುತ್ ಮೊಟಕಿಗೆ ಕಾರಣವಾಗಿದ್ದು , ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!