Monday, July 4, 2022

Latest Posts

ಕಿಟಕಿ ಸರಳು ಮುರಿದು ಮನೆಗೆ ನುಗ್ಗಿ 1.80 ಲಕ್ಷ ನಗ-ನಾಣ್ಯ ದೋಚಿದ ಖದೀಮರು

ಕೆ.ಆರ್.ಪೇಟೆ: ಮನೆಗೆ ನುಗ್ಗಿ ನಗ-ನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದ ಬಸವೇಶ್ವರ ನಗರ ಬಡಾವಣೆಯಲ್ಲಿ ನಡೆದಿದೆ.

ಕೆ.ಆರ್.ಪೇಟೆ ಪಟ್ಟಣದ ಬಸವೇಶ್ವರ ನಗರ ಬಡಾವಣೆಯಲ್ಲಿ ವಾಸವಾಗಿರುವ ಚಂದನ ನಾವಲ್ಟೀಸ್ ಮಾಲೀಕರಾದ ಶಿವಪ್ರಸಾದ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.

ಶಿವಪ್ರಸಾದ್ ಅವರು ಕುಟುಂಬ ಸಮೇತರಾಗಿ ಸಾಲಿಗ್ರಾಮದ ನೆಂಟರ ಮನೆಗೆ ಹೋಗಿದ್ದರು. ಇದನ್ನು ಗಮನಿಸಿರುವ ದುಷ್ಕರ್ಮಿಗಳು ಮನೆಯ ಕಿಟಕಿಯ ಸರಳುಗಳನ್ನು ಮುರಿದು ಮನೆಯ ಬೀರುವಿನಲ್ಲಿಟ್ಟಿದ್ದ 1,80,000 ರೂ ನಗದು, ಮೂರು ಜೊತೆ ಚಿನ್ನದ ಓಲೆಗಳು, ಒಂದು ವಜ್ರದ ಉಂಗುರ ಹಾಗೂ ಅರ್ಧ ಕೆ.ಜಿ ಬೆಳ್ಳಿಯ ಆಭರಣಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ.

ಶಿವಪ್ರಸಾದ್ ದಂಪತಿಗಳು ಸಾಲಿಗ್ರಾಮದಿಂದ ನೆಂಟರ ಮನೆಯಿಂದ ಸಂಜೆ ಮರಳಿ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಕಂಡು ಬಂದಿದೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಕಳ್ಳರ ಪತ್ತೆಗಾಗಿ ಪೊಲೀಸರು ಬೆರಳಚ್ಚು ತಜ್ಞರು ಹಾಗೂ ಶ್ವಾನದಳದೊಂದಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್‍ಪಿ ನವೀನ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಪಟ್ಟಣ ಪೊಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ತೊಳಸಿನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ಕುರಿತು ಕೆ.ಆರ್.ಪೇಟೆ ಪಟ್ಟಣ ಪೊಲಿಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಸೂಕ್ತ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss