ಬೆಂಗಳೂರು: ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ನಟಿ ಚಂದನಾ ಜೂನ್ 1 ರಂದು ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್ನ ತನ್ನ ಮನೆಯಲ್ಲಿ ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಪ್ರಿಯಕರ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಈ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.