ಹೊಸದಿಲ್ಲಿ: ದೇಶದಲ್ಲಿ ಕೊರೋನಾ ತನ್ನ ಅಟ್ಟಹಾಸ ಮೆರೆಯುತ್ತಲೇ ಇದ್ದು, ಪ್ರತೀ ದಿನ ಸೋಂಕಿನಿಂದ ಬಲಿಯಾಗುವವರ ಸಂಖ್ಯೆ ಏರಿಕೆ ಆಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, 1383 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಈಗಾಗಲೇ ದೇಶದಲ್ಲಿ ಸೋಂಕಿಗೆ 640 ಮಂದಿ ಬಲಿಯಾಗಿದ್ದಾರೆ.
ಕೊರೋನಾ ಸೋಂಕಿಗೆ ಒಂದೇ ದಿನ 1383 ಮಂದಿ ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟು 19,984 ಮಂದಿ ಸೋಂಕಿತರಾಗಿದ್ದಾರೆ.ಅವರಲ್ಲಿ 15474 ಮಂದಿ ಸಕ್ರಿಯ ಸೋಂಕಿತರಿದ್ದು, 3870 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ.