ಹೊಸದಿಗಂತ ವರದಿ, ಶಿವಮೊಗ್ಗ:
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ ಅಂಗವಾಗಿ ಡಿ.25 ರಂದು ಕಿಸಾನ್ ಸಮ್ಮಾನ್ ಯೋಜನೆಯ 2 ನೇ ಕಂತಿನ ಹಣವನ್ನು ದೇಶದ 9.36 ಕೋಟಿ ರೈತರ ಖಾತೆಗೆ 18 ಸಾವಿರ ಕೋಟಿ ಹಾಕಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,
ಅಂದು ಪ್ರಧಾನಿ ಮೋದಿಯವರು ರೈತರನ್ನುದ್ದೇಶಿಸಿ ಭಾಷಣ ಮಾಡಲಿದ್ದು, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಇಡಿ ಟಿವಿ ಪರದೆ ಅಳವಡಿಸಲಾಗುತ್ತದೆ ಎಂದರು.