Thursday, August 11, 2022

Latest Posts

ಕುಂಬಳೆ ಕಡಪ್ಪುರದಲ್ಲಿ ಜನಸಂಘದ ಹಿರಿಯ ಕಾರ್ಯಕರ್ತಗೆ ಸನ್ಮಾನ

ಕುಂಬಳೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 70 ನೇ ಹುಟ್ಟುಹಬ್ಬದ ಅಂಗವಾಗಿ ಕುಂಬಳೆ ಕೊಯಿಪ್ಪಾಡಿ ಕಡಪ್ಪುರದ ಜನಸಂಘದ ಹಿರಿಯ ಕಾರ್ಯಕರ್ತ, ಬಿಜೆಪಿ ಹಿರಿಯ ನೇತಾರ, ಪಕ್ಷದ ಕುಂಬಳೆ ಪಂಚಾಯತ್ ಸಮಿತಿಯ ಮಾಜಿ ಉಪಾಧ್ಯಕ್ಷ , ಮತ್ಸ್ಯ ಕಾರ್ಮಿಕ ಸಂಘದ ಕಾಸರಗೋಡು ಜಿಲ್ಲಾ ಸಮಿತಿಯ ಮಾಜಿ ಸದಸ್ಯರೂ ಆಗಿರುವ ಗಂಗಾಧರ ಕಡಪ್ಪುರ ಅವರನ್ನು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ಆಶ್ರಯದಲ್ಲಿ ಅವರ ನಿವಾಸದಲ್ಲಿ ಶನಿವಾರ ಶಾಲು ಹೊದೆಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಉತ್ತರ ವಲಯ ಅಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್, ಮಂಡಲ ಕಾರ್ಯದರ್ಶಿ ಕೆ.ರಮೇಶ್ ಭಟ್, ಪಂಚಾಯತ್ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಕಾಮತ್ ಮೊದಲಾದವರು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss