Monday, August 8, 2022

Latest Posts

ಕುಲಕರ್ಣಿ ಬಿಜೆಪಿ ಸೇರುತ್ತಾರೆಂಬುದು ಶುದ್ಧ ಸುಳ್ಳು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಹೊಸದಿಗಂತ ವರದಿ,ಮಂಗಳೂರು:

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಮುಂದೆ ಬಿಜೆಪಿ ಸೇರುತ್ತಾರೆ ಎಂಬುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿನಯ್ ಕುಲಕರ್ಣಿ ಅಪರಾಧಿ ಸ್ಥಾನದಲ್ಲಿದ್ದಾರೆ. ಸಿಬಿಐಗೆ ಸೂಕ್ತ ಸಾಕ್ಷ್ಯಾಧಾರ ಸಿಕ್ಕಿರುವುದರಿಂದ ಅವರನ್ನು ವಶಕ್ಕೆ ಪಡೆದಿದೆ ಎಂದರು.

ಕುಲಕರ್ಣಿಯವರ ಕುಟುಂಬಕ್ಕೆ ನ್ಯಾಯ ಸಿಗಬೇಕೆಂಬುದು ಎಲ್ಲರ ಅಪೇಕ್ಷೆಯಾಗಿದೆ. ಆದರೆ ಅವರು ಬಿಜೆಪಿ ಸೇರುತ್ತಾರೆ ಎಂಬುದು ಊಹಾಪೋಹವಷ್ಟೆ. ಇದರಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss