Friday, July 1, 2022

Latest Posts

ಕುಶಾಲನಗರ: ಕಾಡಾನೆ ತುಳಿಕ್ಕೆ ಸಿಲುಕಿ ಓರ್ವ ಸಾವು, ಮತ್ತೋರ್ವ ಗಂಭೀರ

ಕುಶಾಲನಗರ: ಕಾಡಾನೆ ದಾಳಿಗೆ ಸಿಲುಕಿ ಒಬ್ಬರು ಮೃತಪಟ್ಟ ಹಾಗೂ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಂಜರಾಯಪಟ್ಟಣ ಸಮೀಪದ ಕಬ್ಬಿನ ಗದ್ದೆಯಲ್ಲಿ ನಡೆದಿದೆ.
ಬ್ಬಿನ ಗದ್ದೆ ಗ್ರಾಮದ ಚನ್ನಪ್ಪ ಎಂಬವರ ಪುತ್ರ ಎಂ.ಸಿ.ಲೋಕೇಶ್ (೩೫) ಮೃತ ದುರ್ದೈವಿ. ಅದೇ ಗ್ರಾಮದ ಮುತ್ತ (೬೫) ಎಂಬವರು ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ ಸಾಗಿಸಲ್ಪಟ್ಟಿದ್ದಾರೆ.
ಗ್ರಾಮದ ಸಮೀಪದ ಆನೆಕಾಡು ಮೀಸಲು ಅರಣ್ಯ ಪ್ರದೇಶಕ್ಕೆ ಸೌದೆಗೆಂದು ತೆರಳಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಲೋಕೇಶ್ ಅವರನ್ನು ಕೂಡಲೇ ಕುಶಾಲನಗರ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss