Friday, July 1, 2022

Latest Posts

ಕುಶಾಲನಗರ| ಶ್ರದ್ಧಾ ಕೇಂದ್ರ-ನದಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಹೊಸದಿಗಂತ ವರದಿ,ಕುಶಾಲನಗರ:

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 6ನೇ ವರ್ಷದ ಶ್ರದ್ಧಾ ಕೇಂದ್ರ ಮತ್ತು ನದಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಸಹಯೋಗದಲ್ಲಿ ಕುಶಾಲನಗರದ ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ನಡೆದ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯತಿ ಅಧ್ಯಕ್ಷ ಜಯವರ್ಧನ್ ಚಾಲನೆ ನೀಡಿದರು.

ಅಯ್ಯಪ್ಪಸ್ವಾಮಿ ದೇವಾಲಯದ ಹೊರ ಆವರಣ ಮತ್ತು ನದಿ ಸ್ನಾನಘಟ್ಟದ ಸ್ವಚ್ಛತೆ ನಡೆಯಿತು. ನದಿಯಲ್ಲಿ ಎಸೆಯಲಾಗಿದ್ದ ಬಟ್ಟೆ, ಬರೆ ತ್ಯಾಜ್ಯಗಳನ್ನು ಕಾರ್ಯಕರ್ತರು ತೆರವುಗೊಳಿಸಿದರು.

ಈ ಸಂದರ್ಭ ಮಾತನಾಡಿದ ಪಂಚಾಯ್ತಿ ಅಧ್ಯಕ್ಷ ಜಯವರ್ಧನ್, ಪ್ರತಿಯೊಬ್ಬರೂ ಪರಿಸರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮೂಲಕ ಸ್ವಚ್ಛ ಪರಿಸರ ನಿರ್ಮಾಣಗೊಳ್ಳಲು ಸಾಧ್ಯ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ಒಕ್ಕೂಟದ ಅಧ್ಯಕ್ಷೆ ಬುಶೀರಾ, ಸೇವಾಪ್ರತಿನಿಧಿ ವಿಜಯಲಕ್ಷ್ಮಿ, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್.ಚಂದ್ರಮೋಹನ್, ಡಿ.ಆರ್.ಸೋಮಶೇಖರ್, ಕೆ.ಆರ್.ಶಿವಾನಂದ ಮತ್ತು 20ಕ್ಕೂ ಅಧಿಕ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss