Thursday, August 11, 2022

Latest Posts

ಕೂಡಲೇ ಶಿರಾ ಕೆರೆಗೆ ಹೇಮಾವತಿ ನೀರು ಹರಿಸುವಂತೆ ಸಚಿವ ಮಾಧುಸ್ವಾಮಿ ಸೂಚನೆ

ತುಮಕೂರು: ಶಿರಾ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಕೂಡಲೇ ಶಿರಾ ಕೆರೆಗೆ ಹೇಮಾವತಿ ನೀರು ಹರಿಸುವಂತೆ ಹೇಮಾವತಿ ನಾಲಾ ಇಂಜಿನಿಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ಧ ಅವರು ಅಲ್ಲಿನ ಜನರಿಂದಲೂ ಒತ್ತಡ ಬಂದಿದ್ದು ಈಗ ರೂಪಿಸಲಾಗಿರುವ ವೇಳಾಪಟ್ಟಿಯಲ್ಲಿ ವ್ಯತ್ಯಾಸ ಆಗದಂತೆ ನೀರು ಹರಿಸುವಂತೆ ಸೂಚಿಸಿದರು.
ಬೆಂಗಳೂರಿನ ಟ್ರಿಟೆಡ್ ನೀರನ್ನು ದಾಬಸ್ ಪೇಟೆ ಕೈಗಾರಿಕಾ ಪ್ರದೇಶಕ್ಕೆ ಹೊರಡಿಸಲು ಯೋಜನೆ ರೂಪಿಸಲಾಗುತ್ತಿದೆ..ತುಮಕೂರು ಗ್ರಾಮಾಂತರದಲ್ಲಿ ಈ ನೀರು ಸಂಗ್ರಹಿಸಲು 8-10ಕೆರೆಗಳನ್ನು ಗುರುತಿಸುವುದಕ್ಕೆ ಇಂಜಿನಿಯರ್ ಗಳಿಗೆ ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss