Thursday, July 7, 2022

Latest Posts

ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಮೂವರ ಬಂಧನ

ಹೊಸದಿಗಂತ ವರದಿ, ಮೈಸೂರು

ಕೂಲಿಕಾರ್ಮಿಕರ ಮೇಲೆ ಹಲ್ಲೆ ನಡೆಸಿ, ಅವರ ಬಳಿಯಿದ್ದ ಹಣ, ಮೊಬೈಲ್‌ನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ ಮೂವರನ್ನು ಮೈಸೂರಿನ ಮೇಟಗಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮoಡ್ಯದ ಪಾಂಡವಪುರದ ಶರತ್(19), ಮೈಸೂರಿನ ಶರತ್ (20) ಹಾಗೂ ಶೀನಿವಾಸ್ (32) ಬಂಧಿತ ಆರೋಪಿಗಳು. ಇವರಿಂದ ಎರಡು ಮೊಬೈಲ್ ಫೋನ್, 400 ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು-ಮೈಸೂರು ರಸ್ತೆಯ ಸಿದ್ದಲಿಂಗಪುರ ಬಳಿಯಿರುವ ಶ್ರೀಯ ಕಂಫರ್ಟ್ಸ್ ಎದುರು ಹೆದ್ದಾರಿ ಕಾಮಗಾರಿ ಮಾಡುವ ಕೆಲಸಗಾರರು ಉಳಿದುಕೊಳ್ಳಲು ತಾತ್ಕಾಲಿಕವಾಗಿ ಶೆಡ್ ನಿರ್ಮಿಸಲಾಗಿತ್ತು. ವಿಶ್ರಾಂತಿ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮೇಲೆ ಕೆಲವು ದುಷ್ಕರ್ಮಿಗಳು ದೊಣ್ಣೆಯಿಂದ ಹಲ್ಲೆ ನಡೆಸಿ ಬೆದರಿಸಿ ಹಣ ಮತ್ತು ಮೊಬೈಲ್ ಕಸಿದು ಪರಾರಿಯಾಗಿದ್ದರು. ಈ ಸಂಬoಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಮೂರೇ ದಿನದಲ್ಲಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss