ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರ್ಕಾರದ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಆದರೆ ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.
ಈ ಕುರಿತು ಮಾತನಾಡಿದ 40 ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ಮುಖಂಡ ಅಭಿಮನ್ಯು ಕೊಹಾರ್, ಕೃಷಿ ಮಸೂದೆ ವಿಚಾರವಾಗಿ ಸುಪ್ರಿಂ ಕೋರ್ಟ್ ರೈತರ ಪರ ತೋರಿದ ಕಾಳಜಿಗೆ ಧನ್ಯವಾದ. ಆದರೆ ಕೃಷಿ ಮಸೂದೆ ಕುರಿತಾದ ಚರ್ಚೆಗೆ ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿಯಲ್ಲಿ ರೈತರು ಭಾಗಿಯಾಗೋದಿಲ್ಲ. ಕೃಷಿ ಮಸೂದೆ ವಿರೋಧಿಸಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಈ ಕೂಡಲೇ ಕೃಷಿ ಮಸೂದೆ ರದ್ದು ಮಾಡಿ ಇದರ ಸಾಧಕ ಬಾಧಕಗಳ ಕುರಿತಾದ ಚರ್ಚೆಗೆ ಸಮಿತಿ ರಚನೆ ಮಾಡುವಂತೆ ಆದೇಶ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ನ ಕಾಳಜಿಗೆ ಕೃತಜ್ಞತೆ ಸಲ್ಲಿಸಿದ ರೈತ ಸಂಘಟನೆಗಳು ನಾವು ಯಾವುದೇ ಸಮಿತಿಯ ಸದಸ್ಯರಾಗೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.