Saturday, August 13, 2022

Latest Posts

ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸುಧಾರಣೆ: ಸಚಿವ ಡಾ. ಸುಧಾಕರ್

ಬೆಂಗಳೂರು: ಲೋಕಸಭೆಯಲ್ಲಿ ನಿನ್ನೆ ಅನುಮೋದನೆಗೊಂಡ ಮಸೂದೆಗಳು ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸುಧಾರಣೆ ತರುತ್ತವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ಪ್ರವಾಹದಿಂದ ಹಾಗೂ ಕೊರೋನಾ ಸಮಸ್ಯೆಯಿಂದ ಬೇಸತ್ತ ರೈತರಿಗೆ ಇದು ಸಹಕಾರಿಯಾಗಲಿದೆ. ರೈತರ ಬೆಳೆಗೆ ಪಾರದರ್ಶಕ, ಮುಕ್ತ ಹಾಗೂ ಸ್ಪರ್ದಾತ್ಮಕ ಮಾರುಕಟ್ಟೆ ಕಲ್ಪಿಸಲಾಗಿದೆ. ಇದರಿಂದ ಕೃಷಿ ಲಾಭದಾಯಕ ವೃತ್ತಿಯಾಗಿ ಪರಿವರ್ತನೆ ಆಗಲಿದೆ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಲು ಅಗತ್ಯವಿರುವ ಬಂಡವಾಳ ಹೂಡಿಕೆ, ತಂತ್ರಜ್ಞಾನ ಅಳವಡಿಕೆ ಹಾಗೂ ಮೌಲ್ಯವರ್ಧನೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss