Wednesday, August 10, 2022

Latest Posts

ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ಮಾಡಿದವರು ರೈತರಿಗೆ ಅವಮಾನ ಮಾಡುತ್ತಿದ್ದಾರೆ: ಬೇಸರ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಕೃಷಿ ಮಸೂದೆಯನ್ನು ವಿರೋಧಿಸಿ ರೈತರ ಕೃಷಿ ಯಂತ್ರಗಳನ್ನು ಸುಟ್ಟು ಹಾಕಿ ರೈತರಿಗೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಹಲವು ರಾಜ್ಯಗಳಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಿ, ರೈತರು ಬಳಸುವ ಯಂತ್ರಗಳನ್ನು ಸುಟ್ಟು ಹಾಕಿರುವುದು ರೈತರಿಗೆ ಅವಮಾನ ಮಾಡಿದಂತೆ.

ಕೃಷಿ ಮಸೂದೆ ರೈತರಿಗೆ, ಕಾರ್ಮಿಕರಿಕೆ, ಮಹಿಳೆಯರಿಗೆ ಸದೃಢಗೊಳೀಸಲಿದ್ದು, ರೈತರಿಗೆ ಈ ಮಸೂದೆಯಿಂದ ಸಂಪೂರ್ಣ ಬೆಂಬಲ ಸಿಗಲಿದ್ದು, ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯ ನೀಡಲಾಗಿದೆ. ಆದರೆ ಕೆಲವರು ರೈತರನ್ನು ತಪ್ಪು ದಾರಿಗೆ ತರುತ್ತಿದ್ದಾರೆ ಎಂದರು.

ಸೋಮವಾರ ಬೆಳಗ್ಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆಗೆ ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುವ ಮೂಲಕ ಕೃಷಿ ಮಸೂದೆಯನ್ನು ವಿರೋಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಲಾಗೊದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss