Thursday, August 18, 2022

Latest Posts

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ 15-20 ಜನರು ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ್ದಾರೆ.

ವಿವಾದಾತ್ಮಕ ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಪ್ಪಿಗೆ ನೀಡಿದ ಬಳಿಕ ಈ ಘಟನೆ ನಡೆದಿದೆ. ಕೃಷಿ ಮಸೂದೆಗಳಿಗೆ ಸಹಿ ಮಾಡದಂತೆ 18 ಪಕ್ಷಗಳ ಮುಖಂಡರು ಒತ್ತಾಯಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!