ಕೃಷ್ಣರಾಜಪೇಟೆ : ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಐಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಎನ್. ಅಣ್ಣೇಗೌಡ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ರೈತ.
ಶುಂಠಿ ಬೆಳೆಯುವ ಸಲುವಾಗಿ ವಿಜಯಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಲೇವದೇವಿ ಜನರೊಂದಿಗೆ ಮೂರು ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ. ಸಾಧಿಸಲು ವಿಜಯಬ್ಯಾಂಕ್ ನಿಂದ ಸಾಲ ಮರುಪಾವತಿ ಮಾಡುವಂತೆ ನೋಟೀಸ್ ನೀಡಲಾಗಿತ್ತು. ಬ್ಯಾಂಕ್ ನೋಟೀಸ್ ನೋಡಿ ಹೆದುರಿ ತಮ್ಮ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.