Wednesday, August 17, 2022

Latest Posts

ಕೆಂಜಾರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ: ಸಂಸದ ನಳಿನ್ ಕುಮಾರ್ ಕಟೀಲು

ಮಂಗಳೂರು: ಭಾರತದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಮಂಗಳೂರಿನಲ್ಲಿ ಸ್ಥಾಪನೆಗೊಳ್ಳಲಿದೆ. ಕೆಂಜಾರು ಸಮೀಪ 158 ಎಕರೆ ಪ್ರದೇಶದಲ್ಲಿ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪಿಸಲು ಕೆಐಎಡಿಬಿಯಿಂದ ಭೂಮಿ ಪಡೆದುಕೊಳ್ಳಲಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್, ಈ ಅಕಾಡೆಮಿಯು ದೇಶದ ಕಡಲ ರಕ್ಷಣೆಗಾಗಿ ವೃತ್ತಿಪರ ಕೋಸ್ಟ್ ಗಾರ್ಡ್ ಅಧಿಕಾರಿಗಳು ಹಾಗೂ ಸಿಬ್ಬಂದಿ ತರಬೇತಿಯಲ್ಲಿ ಮೈಲಿಗಲ್ಲು ಆಗಲಿದೆ. ಈ ಅಕಾಡೆಮಿಯನ್ನು ಮಂಗಳೂರಿಗೆ ನೀಡಿದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಭೂಮಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!