Sunday, June 26, 2022

Latest Posts

ಕೆಂಪು ಕೋಟೆ ಹಿಂಸಾಚಾರ: ನಟ ದೀಪ್ ಸಿಧು 7 ದಿನ ಪೊಲೀಸರ ವಶಕ್ಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗಣರಾಜ್ಯೋತ್ಸವ ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರಾಗಿರುವ ದೀಪ್ ಸಿಧುಗೆ ದೆಹಲಿ ಕೋರ್ಟ್‌ 7 ದಿನಗಳವರೆಗೂ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.
ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಪ್ರೇರೇಪಣೆ ನೀಡಿದವರಲ್ಲಿ ಈತ ಪ್ರಮುಖ ವ್ಯಕ್ತಿ ಎಂದು ಪೊಲೀಸರು ಆರೋಪಿಸಿದ ಬೆನ್ನಲ್ಲೇ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಪ್ರಿಗ್ಯಾ ಗುಪ್ತಾ, ಸಿಧು ಅವರನ್ನು ಏಳು ದಿನಗಳು ಪೊಲೀಸ್‌ ವಶಕ್ಕೆ ನೀಡಿ ಆದೇಶಿಸಿದರು.
ದೀಪ್‌ ಸಿಧು ಪರ ವಕಾಲತ್ತು ವಹಿಸಿದ್ದವರು, ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡದಂತೆ ದೆಹಲಿ ಕೋರ್ಟ್‌ಗೆ ಮನವಿ ಮಾಡಿದರು. ಹಿಂಸಾಚಾರಕ್ಕೂ ಇವರಿಗೂ ಯಾವುದೇ ಸಂಬಂಧವಿಲ್ಲ, ತಪ್ಪಾದ ಸಮಯದಲ್ಲಿ ತಪ್ಪಾದ ಸ್ಥಳದಲ್ಲಿದ್ದರು ಎಂದು ವಾದಿಸಿದರು.
ಇಂದು ಅವರನ್ನು ಚಂಡೀಗಢ ಮತ್ತು ಅಂಬಾಲಾ ನಡುವಿನ ಜಿರಾಕ್ ಪುರ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss