Tuesday, June 28, 2022

Latest Posts

ಕೆಆರ್‌ಎಸ್ ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಪ್ರಾಯೋಗಿಕ ಸ್ಪೋಟಕ್ಕೆ ನಿರ್ಧಾರ : ಹಿರಿಯ ವಿಜ್ಞಾನಿ ಪುಷ್ಪಾ

ಹೊಸ ದಿಗಂತ ವರದಿ, ಮಂಡ್ಯ:

ಕೃಷ್ಣರಾಜಸಾಗರ ಜಲಾಶಯ ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಮುಂದಿನ ಒಂದೆರಡು ತಿಂಗಳಲ್ಲಿ ಬೇಬಿ ಬೆಟ್ಟದಲ್ಲಿ ಸೇರಿದಂತೆ ಹಲವೆಡೆ ಪ್ರಾಯೋಗಿಕ ಸ್ಪೋಟ ನಡೆಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಪುಷ್ಪಾ ತಿಳಿಸಿದರು.
ಶಿವಮೊಗ್ಗದಲ್ಲಿ ಜಿಲೆಟಿನ್ ಕಡ್ಡಿ ತುಂಬಿದ್ದ ಲಾರಿ ಸ್ಪೋಟ ಪ್ರಕರಣ ವರದಿಯಾದ ಬೆನ್ನಲ್ಲೇ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ನಿರ್ದೇಶನದಂತೆ ಪಾಂಡವಪುರ ತಾಲೂಕಿನ ಬೇಬಿಬೆಟ್ಟಕ್ಕೆ ಕಂದಾಯ, ಪೊಲೀಸ್ ಅಧಿಕಾರಿಗಳೊಂದಿಗೆ ತೆರಳಿ ಸ್ಪೋಟಕ ವಸ್ತುಗಳ ಸಂಗ್ರಹ ಕುರಿತು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
ಕೃಷ್ಣರಾಜಸಾಗರ ಅಣೆಕಟ್ಟೆ ಬಳಿಯೂ 2018ರಲ್ಲಿ ನಿಗೂಢ ಶಬ್ಧಗಳು ವರದಿಯಾಗಿದ್ದವು. ಗಣಿ ಸ್ಪೋಟದಿಂದ ಉಂಟಾಗಿರುವ ಶಬ್ಧಗಳೆಂದು ನಂಬಲಾಗಿತ್ತು. ಇಂತಹ ಸ್ಪೋಟಗಳಿಂದ ಕೆಆರ್‌ಎಸ್ ಅಣೆಕಟ್ಟೆಗೆ ಅಪಾಯವಿರುವ ಬಗ್ಗೆಯೂ ಅಭಿಪ್ರಾಯಗಳು, ವರದಿಗಳು ಕೇಳಿಬಂದಿದ್ದವು. ಆದರೆ, ಇಂದಿಗೂ ಆ ನಿಗೂಢ ಶಬ್ಧದ ಮೂಲ ಪತ್ತೆಯಾಗಿಲ್ಲ ಎಂದು ಹೇಳಿದರು.
ಅಣೆಕಟ್ಟೆಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಒಂದೆರಡು ತಿಂಗಳಲ್ಲಿ ಬೇಬಿಬೆಟ್ಟವನ್ನು ಒಳಗೊಂಡಂತೆ ಕೆಆರ್‌ಎಸ್ ಜಲಾಶಯದ ಸುತ್ತಲಿನ ಪ್ರದೇಶಗಳಲ್ಲಿ ತಜ್ಞರ ತಂಡದಿಂದ ಪ್ರಾಯೋಗಿಕ ಸೊಓೀಂಟ ನಡೆಸಲಾಗುವುದು. ಇದರಿಂದ ಅಣೆಕಟ್ಟೆಯಿಂದ ಎಷ್ಟು ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಅಥವಾ ಗಣಿಸ್ಪೋಟ ನಡೆಸಬಾರದು ಎನ್ನುವುದು ಗೊತ್ತಾಗಲಿದೆ ಎಂದು ಹೇಳಿದರು.
ಅಕ್ರಮ ಗಣಿಗಾರಿಕೆ ನಿಂತಿಲ್ಲ:
ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಿಂತಿಲ್ಲ. ರಾತ್ರಿ ವೇಳೆ ಗಣಿಗಾರಿಕೆ ನಿರಂತರವಾಗಿ ನಡೆದಿದೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಅಕಾರಿಗಳ ಮೂಲಕ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದೇವೆ. ಇಟಾಚಿ, ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಗಣಿಗಾರಿಕೆ ನಡೆಸುವ ಸ್ಥಳಗಳಲ್ಲಿ 75 ಕಂದಕಗಳನ್ನು ನಿರ್ಮಿಸಿದ್ದರೂ ಅವುಗಳನ್ನು ಮುಚ್ಚಿ ಗಣಿಗಾರಿಕೆ ನಡೆಸಲಾಗುತ್ತಿದೆ. ಶಿವಮೊಗ್ಗದಲ್ಲಿ ಸಂಭವಿಸಿದಂತಹ ಸೊಓೀಂಟ ಪ್ರಕರಣ ಇನ್ನೆಲ್ಲೂ ಸಂಭವಿಸಿದಂತೆ ಗಣಿ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿರುವುದಾಗಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss