Friday, July 1, 2022

Latest Posts

ಕೆಆರ್‍ಎಸ್ ಅಣೆಕಟ್ಟೆ ಪುನಶ್ಚೇತನ ಶೀಘ್ರ ಪೂರ್ಣ: ಸಚಿವ ನಾರಾಯಣಗೌಡ

ಮಂಡ್ಯ: ಕೊರೋನಾ  ವೈರಸ್ ಹಾವಳಿಯ ನಡುವೆಯೂ ಭಾನುವಾರ ಜಿಲ್ಲಾದ್ಯಂತ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರದ ಸರ್‍ಎಂವಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಕೆಆರ್‍ಎಸ್ ಅಣೆಕಟ್ಟೆ ಪುನಶ್ಚೇತನಗೊಳಿಸಲು 58.46 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಅದು ಶೀಘ್ರದಲ್ಲಿ ಮುಗಿಯಲಿದೆ. ವಿಶ್ವೇಶ್ವರಯ್ಯ ನಾಲೆಯ ಜಾಲದ 2ನೇ ಹಂತದ 46.25 ಕಿ.ಮೀವರೆಗಿನ ಆಧುನೀಕರಣ ಕಾಮಗಾರಿ 330.48 ಕೋಟಿ ರೂ. ಕೈಗೆತ್ತಿಕೊಳ್ಳಲಾಗಿದೆ. ಅಲ್ಲದೆ, ಜಿಲ್ಲೆಯ ವಿವಿಧ ತಾಲೂಕಿನಲ್ಲಿರುವ ಪ್ರವಾಸಿ ತಾಣಗಳ ಅಭಿವೃದ್ಧಿಗೆ 13.19 ಕೋಟಿ ರೂ. ವೆಚ್ಚದಲ್ಲಿ 15 ಕಾಮಗಾರಿ ಮಂಜೂರಾಗಿದೆ ಎಂದರು.
ಮಂಡ್ಯ ನಗರದಲ್ಲಿ ಅಮೃತ್ ಯೋಜನೆಯಡಿ 136.90 ಕೋಟಿ ರೂ. ವೆಚ್ಚದಲ್ಲಿ ನೀರು ಸರಬರಾಜು, ಒಳಚರಂಡಿ ಕಾಮಗಾರಿ ನಡೆಯುತ್ತಿದೆ. ಕಾವೇರಿ ನೀರಾವರಿ ನಿಗಮದ ವತಿಯಿಂದ ಕೊತ್ತತ್ತಿ ಹೋಬಳಿಯ 28 ಗ್ರಾಮಗಳಿಗೆ ಕುಡಿಯುವ ನೀರು ಹಾಗೂ 5 ಕೆರೆಗಳಿಗೆ ನೀರು ತುಂಬಿಸುವ 18.5 ಕೋಟಿ ರೂ. ವೆಚ್ಚದ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ. ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಮಂಡ್ಯದ ಬೆಲ್ಲ ಉತ್ಪನ್ನ ಗುರುತಿಸಲಾಗಿದೆ. ಮೌಲ್ಯವರ್ಧನೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆ ಪೆÇ್ರೀ ಶೇ.35ರ ಸಹಾಯಧನ ಒದಗಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಂಪೂರ್ಣವಾಗಿ ಕ್ರಮ ವಹಿಸಿದೆ. ಮಂಡ್ಯ ಇಡೀ ರಾಜ್ಯದಲ್ಲೇ ಮಾದರಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲು 5 ಸಾವಿರ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುತ್ತಾರೆ. ಭಾಷೆ, ಸಾಹಿತ್ಯ, ಸಾಂಸ್ಕøತಿಕ ಚರಿತ್ರೆಗಳ ಅರಿವು ಮತ್ತು ಅಧ್ಯಯನಕ್ಕೆ ಆಧಾರಗಳಾದ ಶಾಸನಗಳಲ್ಲಿ ಕಂದಪದ್ಯ ಮತ್ತು ಶ್ಲೋಕಗಳು ಹೆಚ್ಚು ಬಳಕೆಯಾಗಿದೆ. ಇಲ್ಲಿನ ಭಾಷೆ ಜನಪದರ ಆಡುನುಡಿಯೇ ಆಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss