spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೆಆರ್ ಎಸ್ ಸುತ್ತ ಗಣಿಗಾರಿಕೆ ನಡೆಸದಂತೆ ಕಟ್ಟಚ್ಚರ ವಹಿಸಿ: ಅಧಿಕಾರಿಗಳಿಗೆ ಸಂಸದೆ ಸುಮಲತಾ ತರಾಟೆ

- Advertisement -Nitte

ಮಂಡ್ಯ : ಕೆಆರ್‍ಎಸ್ ನಮ್ಮ ಬದುಕು. ರೈತರ ಜೀವನಾಡಿ. ಕನ್ನಂಬಾಡಿಕಟ್ಟೆಗೆ ಏನಾದರೂ ಅಪಾಯವಾದರೆ ಅದರ ಪರಿಣಾಮ ಊಹಿಸಲಸಾಧ್ಯ. ಹೀಗಾಗಿ ಜಲಾಶಯದ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಕಟ್ಟೆಯ ಹಿತದೃಷ್ಟಿಯಿಂದ ಕೆಆರ್‍ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸದಂತೆ ಕಟ್ಟೆಚ್ಚರ ವಹಿಸಿ. ಅಕ್ರಮ ಗಣಿಗಾರಿಕೆ ತಡೆಯುವುದು ನಿಮ್ಮ ಕರ್ತವ್ಯ ಅದನ್ನು ಮೊದಲು ಮಾಡಿ ಎಂದು ಸಂಸದೆ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ನಗರದ ಜಿ.ಪಂ.ನ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೇಂದ್ರ ವಲಯ/ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ(ದಿಶಾ)ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಆರ್‍ಎಸ್ ಸುತ್ತಮುತ್ತಲ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಇದಕ್ಕೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಅಧಿಕಾರಿ ಪುಷ್ಪಾ, ಕೆಆರ್‍ಎಸ್‍ನಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಲಾಗಿದ್ದು ಕ್ರಷರ್‍ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಇಲಾಖೆಯಿಂದ ಗಣಿಗಾರಿಕೆಗೆ ಯಾರಿಗೂ ಅವಕಾಶ ಕೊಟ್ಟಿಲ್ಲ. ಆದರೆ, ಒಂದು ತಿಂಗಳಿಂದ ರಾತ್ರಿ ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹೀಗಾಗಿ ರಾತ್ರಿ ವೇಳೆಯೂ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೆಆರ್‍ಎಸ್ ಬಳಿ ಹೊಸದಾಗಿ ಚೆಕ್‍ಪೋಸ್ಟ್ ಸ್ಥಾಪಿಸಲಾಗುತ್ತಿದ್ದು, ಅಕ್ರಮ ಗಣಿಗಾರಿಕೆ ತಡೆಗೆ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.
ಇದರಿಂದ ಸಮಾಧಾನಗೊಳ್ಳದ ಸಂಸದೆ, ಪ್ರಯತ್ನವಲ್ಲ, ಗಂಭೀರ ಕ್ರಮ ಅಗತ್ಯ. ಜಲಾಶಯ ರಕ್ಷಣೆ ನಮ್ಮೆಲ್ಲರ ಹೊಣೆ. ಒಂದೊಮ್ಮೆ ನಿರ್ಲಕ್ಷಿಸಿದರೆ ಖಂಡಿತಾ ದೊಡ್ಡ ಅನಾಹುತವಾಗಲಿದೆ. ಸ್ವಾರ್ಥಕ್ಕೆ ಪ್ರಕೃತಿಯನ್ನು ನಾಶ ಮಾಡುವುದು ಸರಿಯಲ್ಲ. ಈಗಾಗಲೇ ಕೆರೆಗಳ ವಿಚಾರದಲ್ಲಿ ನಾವು ಅನುಭವಿಸುತ್ತಿದ್ದೇವೆ. ಅಕ್ರಮ ಗಣಿಗಾರಿಕೆ ವಿಚಾರವನ್ನು ಇಂದಿನಿಂದಲೇ ಗಂಭೀರವಾಗಿ ಪರಿಗಣಿಸಿ ಎಂದು ಸೂಚಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss