Saturday, November 1, 2025

‘ಕೆಜಿಎಫ್’ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗಕ್ಕೆ ಇದು ನೋವಿನ ಸುದ್ದಿ. ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ಇಂದು ಬೆಳಗಿನ‌ಜಾವ ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ.

‘ಆ ದಿನಗಳು’, ‘ಕೆಜಿಎಫ್’, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.

error: Content is protected !!