Thursday, August 11, 2022

Latest Posts

ಕೆಮಿಕಲ್ ಫ್ಯಾಕ್ಟರಿ ಅಗ್ನಿ ದುರಂತ| 22 ಗಂಟೆಗಳಾದರೂ ಧಗಧಗನೇ ಉರಿಯುತ್ತಿದೆ ಬೆಂಕಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೂ ಧಗಧಗನೇ ಉರಿಯುತ್ತಿರುವ ಬೆಂಕಿ ಇನ್ನೂ ಶಾಂತವಾಗಿಲ್ಲ.

ಅಗ್ನಿ ದುರಂತ ನಡೆದ ಕಾರ್ಖಾನೆ ಸುತ್ತಮುತ್ತಲಿನ ಮನೆಗಳ ನಿವಾಸಿಗರು ಬೇರೆ ಸ್ಥಳಕ್ಕೆ ತೆರಳಿದ್ದಾರೆ. ಮಂಗಳವಾರ ಮುಂಜಾನೆ 10 30ರಿಂದ ಬ್ಯಾರಲ್ ಕೆಮಿಕಲ್ ಸೇರಿ ಪಕ್ಕದಲ್ಲಿದ್ದ ಪ್ಲಾಸ್ಟಿಕ್ ಕಾರ್ಖಾನೆ ಕೂಡ ಬೆಂಕಿಗಾಹುತಿಗೊಂಡಿದೆ.

ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಬೆಂಕಿ ಅವಘಡದಿಂದ 7 ಬೈಕ್, ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಬೆಂಗಿ ನಂದಿಸಲು ಬರೋಬ್ಬರಿ 22 ಗಂಟೆಗಳಿಂದ ಹರಸಾಹಸ ಪಡುತ್ತಿದ್ದಾರೆ.

ಬ್ಯಾಟರಾಯನಪುರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲಿಕ ಸಜ್ಜನ್ ರಾಜ್ ಸೇರಿದಂತೆ ಇಬ್ಬರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss