spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೆಲಸ ಕಳೆದುಕೊಂಡ ಆಯುಷ್ ವೈದ್ಯರನ್ನು ಮರು ನೇಮಕ ಮಾಡಿ: ಬಿಜೆಪಿ ಮುಖಂಡರ ಒತ್ತಾಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಶನಿವಾರಸಂತೆ:

ಸರಕಾರ ಎಂಬಿಬಿಎ ವೈದ್ಯರನ್ನು ನೇಮಕಾತಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 15 ಮಂದಿ ಆಯುಷ್ (ಬಿಎಎಂಎಸ್)ವೈದ್ಯರನ್ನು ಆ.1 ರಿಂದ ಕರ್ತವ್ಯದಿಂದ ಮುಕ್ತಗೊಳಿಸಲಾಗಿದ್ದು, ಕೆಲಸ ಕಳೆದುಕೊಂಡ ಆಯುಷ್ ವೈದ್ಯರನ್ನು ಮತ್ತೆ ಆಸ್ಪತ್ರೆಗಳಿಗೆ ಮರು ನೇಮಕ ಮಾಡಿಕೊಳ್ಳಬೇಕೆಂದು ಸೋಮವಾರಪೇಟೆ ತಾಲೂಕು ಬಿಜೆಪಿ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ‌ ತಾಲೂಕು ಅಧ್ಯಕ್ಷ ರಘು ಅವರು, ಶನಿವಾರಸಂತೆ ಆಸ್ಪತ್ರೆ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧ ಕಡೆಯ ಸರಕಾರಿ ಆಸ್ಪತ್ರೆಗಳಲ್ಲಿ 15 ಮಂದಿ ಆಯುಷ್ ವೈದ್ಯರು ಗುತ್ತಿಗೆ ಆಧಾರದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಮತ್ತು ಈ ವರ್ಷವೂ ಕೋವಿಡ್ ವಿರುದ್ಧ ಆಯುಷ್ ವೈದ್ಯರು ಹೋರಾಡಿದ್ದಾರೆ.ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲೂ ಆಯುಷ್ ವೈದ್ಯರು ಅನನ್ಯವಾದ ಸೇವೆ ನೀಡಿದ್ದಾರೆ ಎಂದು ಸ್ಮರಿಸಿದರು.
ಈಗಲೂ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿಲ್ಲ ಮತ್ತು ಇದೇ ಆಯುಷ್ ವೈದ್ಯರು ಲಸಿಕೆ ಅಭಿಯಾನದಲ್ಲೂ ಕರ್ತವ್ಯ ನಿರ್ವಹಿಸುತ್ತಿರುವ ಪರಿಸ್ಥಿತಿಯಲ್ಲಿ ಮತ್ತು ಆರೋಗ್ಯ ಕಷ್ಟ ಕಾಲದಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರುವ ಆಯುಷ್ ವೈದ್ಯರನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಕರ್ತವ್ಯದಿಂದ ಬಿಡುಗಡೆ ಮಾಡಿರುವ ಕ್ರಮ ಸರಿಯಲ್ಲ ಎಂದು ರಘು ಅಭಿಪ್ರಾಯಪಟ್ಟರು.
ಆಯುಷ್ ವೈದ್ಯರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡದೆ ಏಕಾಏಕಿ ಕರ್ತವ್ಯದಿಂದ ಬಿಡುಗಡೆ ಮಾಡಿರುವುದು ಖಂಡನೀಯ.ಈಗ ಕೆಲಸ ಕಳೆದುಕೊಂಡಿರುವ ವೈದ್ಯರು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದು ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಕರ್ತವ್ಯದಿಂದ ಬಿಡುಗಡೆಗೊಳಿಸಿರುವ ಜಿಲ್ಲೆಯ ಗುತ್ತಿಗೆ ಆಧಾರಿತ ಆಯುಷ್ ವೈದ್ಯರನ್ನು ಮತ್ತೆ ಕರ್ತವ್ಯಕ್ಕೆ ಮರು ನೇಮಕ ಮಾಡುವಂತೆ ಮುಂದಿನ ದಿನಗಳಲ್ಲಿ ಆರೋಗ್ಯ ಸಚಿವರಿಗೂ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಕೃಷಿ ಮೋರ್ಚಾ ಅಧ್ಯಕ್ಷ ರಕ್ಷಿತ್, ಯುವ ಮೋರ್ಚಾ ಕಾರ್ಯದರ್ಶಿ ನಿತಿನ್, ಬಿಜೆಪಿ ಪ್ರಮುಖ ಯತೀಶ್, ದುಂಡಳ್ಳಿ ಗ್ರಾ.ಪಂ.ಸದಸ್ಯ ಮನು ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss