Wednesday, August 10, 2022

Latest Posts

ಕೆ.ಆರ್. ಪೇಟೆ| ಕ್ವಾರಂಟೈನ್‍ನಲ್ಲಿರುವವರಿಗೆ ಗುಣಮಟ್ಟದ ಆಹಾರ ನೀಡದಿದ್ದಲ್ಲಿ ಕ್ರಮ-ಸಚಿವ ನಾರಾಯಣಗೌಡ

ಕೆ.ಆರ್. ಪೇಟೆ : ಕೋವಿಡ್-19 ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬಂದಿರುವವರು ಸೇರಿದಂತೆ ಕ್ವಾರಂಟೈನ್‍ನಲ್ಲಿರುವವರಿಗೆ ಗುಣಮಟ್ಟದ ಊಟ-ತಿಂಡಿ ನೀಡಿ ಸರಿಯಾಗಿ ನೋಡಿಕೊಳ್ಳದಿದ್ದಲ್ಲಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಎಚ್ಚರಿಕೆ ನೀಡಿದರು.
ತಾಲೂಕಿನ ಜಾಗಿನಕೆರೆ ಕಿತ್ತೂರು ರಾಣಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಲ್ಲಿನ ವ್ಯವಸ್ಥೆ ಕಂಡು ಅಧಿಕಾರಿಗಳನು ತರಾಟೆಗೆ ತೆಗೆದುಕೊಂಡರು.
ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಅವರನ್ನು ಸರಿಯಾಗಿ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಊಟ, ತಿಂಡಿ, ಹಾಲು ಇತ್ಯಾದಿ ವ್ಯವಸ್ಥೆಗಳನ್ನು ಸರಿಯಾಗಿ ಮಾಡುತ್ತಿಲ್ಲ ಎಂಬ ಆರೋಪ ಇದೆ. ಹೀಗೆಯೇ ನಡೆದುಕೊಂಡಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss