Wednesday, August 10, 2022

Latest Posts

ಕೇಂದ್ರದ ಆದೇಶಕ್ಕೆಅಸ್ತು: ಸಿನಿಮಾ ಮಂದಿರಗಳ 100% ಆಸನ ಭರ್ತಿ ಆದೇಶ ಹಿಂಪಡೆದ ತಮಿಳುನಾಡು

ಹೊಸ ದಿಗಂತ ಆನ್ ಡೆಸ್ಕ್:

ಸಿನಿಮಾ ಮಂದಿರಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ಅವಕಾಶ ನೀಡಿದ್ದ ಆದೇಶವನ್ನು ತಮಿಳುನಾಡು ಸರ್ಕಾರ ವಾಪಸ್ ಪಡೆದುಕೊಂಡಿದೆ.
ತಮಿಳುನಾಡು ಸರ್ಕಾರ ಥಿಯೇಟರ್ ಗಳಲ್ಲಿ ಶೇಕಡ 100 ರಷ್ಟು ಮಂದಿ ಪ್ರೇಕ್ಷಕರಿಗೆ ಅವಕಾಶ ನೀಡಿ ಇತ್ತೀಚೆಗೆ ಆದೇಶಿಸಿತ್ತು. ಈ ವೇಳೆ ರಾಜ್ಯ ಸರ್ಕಾರದ ಈ ಆದೇಶವು ಕೊರೋನಾ ಮಾರ್ಗಸೂಚಿ ಉಲ್ಲಂಘನೆಯಾಗಲಿದೆ ಎಂದು ಕೇಂದ್ರ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಆದೇಶವನ್ನು ಹಿಂಪಡೆಯಲಾಗಿದೆ.
ತಮಿಳುನಾಡಿನಲ್ಲಿ ಕಳೆದ ನವೆಂಬರ್ ನಿಂದಲೇ 50% ಆಸನ ಭರ್ತಿಗೆ ಅವಕಾಶ ನೀಡಿ ಸಿನಿಮಾ ಮಂದಿರಗಳನ್ನು ತೆರೆಯಲಾಗಿತ್ತು. ಆದರೂ ಜನರು ಸಿನಿಮಾ ಮಂದಿರಗಳತ್ತ ಸುಳಿಯುತ್ತಿರಲಿಲ್ಲ. ಈಚೆಗೆ ಥಿಯೇಟರ್ ಮಾಲೀಕರ ಜೊತೆ ಸಭೆ ನಡೆಸಿದ ರಾಜ್ಯ ಸರ್ಕಾರ, ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಸೂಚಿಸುವಂತೆ ತಿಳಿಸಿ ಜನವರಿ 4ರಿಂದ ಸಿನಿಮಾ ಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ಅವಕಾಶ ನೀಡಿತ್ತು. ಆದರೆ ಸರ್ಕಾರದ ಈ ಕ್ರಮಕ್ಕೆ ಆಕ್ಷೇಪಗಳು ವ್ಯಕ್ತವಾಗಿದ್ದವು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss