Thursday, July 7, 2022

Latest Posts

ಕೇಂದ್ರ ನಾಯಕರ ಜೊತೆಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ತೀರ್ಮಾನ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ, ಉಡುಪಿ:

ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದೆ. ಅವರು ಕೇಂದ್ರದ ನಾಯಕರ ಜೊತೆ ಸಂವಾದ ನಡೆಸಿ, ಸಮಯ ಬಂದಾಗ ವಿಸ್ತರಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಅವರು ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ನಾಯಕರ ಜೊತೆಗೆ ಚರ್ಚಿಸಿ ಮುಖ್ಯಮಂತ್ರಿಯವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ರಾಜ್ಯದ ಸಚಿವರು ದಿಲ್ಲಿ ಭೇಟಿಯ ಕುರಿತು ಪ್ರತಿಕ್ರಿಯಿಸಿದ ನಳಿನ್, ಕೇಂದ್ರದಿಂದ ಅನುದಾನಗಳನ್ನು, ಕೇಂದ್ರದ ಯೋಜನೆಗಳನ್ನು ಮಂಜೂರು ಮಾಡಿಸುವುದಕ್ಕೆ ಸಚಿವರು ದಿಲ್ಲಿಗೆ ಹೋಗುವುದು ಸಹಜ. ನಿರಂತರವಾಗಿ ಭೇಟಿ ನೀಡುತ್ತಾರೆ. ಈ ಸಂದರ್ಭಗಳಲ್ಲಿ ಅಲ್ಲಿರುವ ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವುದು ಪರಿಪಾಠ ಎಂದು ಸ್ಪಷ್ಟಪಡಿಸಿದರು.

ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ನಳಿನ್ ಕುಮಾರ್ ಕಟೀಲ್, ಎರಡೂ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಬಂದಿದ್ದೇವೆ. ಎರಡು ಕ್ಷೇತ್ರ ಗೆಲ್ಲುತ್ತೇವೆ. ಅದಕ್ಕಾಗಿ ಎರಡೂ ಕ್ಷೇತ್ರದಲ್ಲಿ ಪ್ರಮುಖರ ನಿಯೋಜನೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಯಾವುದೇ ವಿಮಾನ ನಿಲ್ದಾಣಕ್ಕೆ ಹೆಸರಿಡಲು ನಿಯಮಗಳು ಇವೆ. ಎಲ್ಲರ ಅಭಿಪ್ರಾಯ ಪಡೆದುಕೊಂಡೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ದಕ್ಷಿಣ ಕನ್ನಡ ಸಂಸದರೂ ಆಗಿರುವ ನಳಿನ್‌ಕುಮಾರ್ ಕಟೀಲ್ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss