Tuesday, July 5, 2022

Latest Posts

ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಕೇರಳ ಸಿಎಂ ಪಿಣರಾಯಿ ನಿರ್ಣಯ ಮಂಡನೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳ ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ.

ರೈತರ ಸಮಸ್ಯೆಗಳನ್ನು ಚರ್ಚಿಸಲು ಗುರುವಾರ ಒಂದು ಗಂಟೆಯ ವಿಶೇಷ ಅಧಿವೇಶವನ್ನು ಕರೆಯಲಾಗಿತ್ತು. ಈ ಅಧಿವೇಶನದಲ್ಲಿ  ಪಿಣರಾಯಿ ಅವರು  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ರೈತರ ವಿರುದ್ಧವಾಗಿದ್ದು, ಕಾರ್ಪೊರೇಟ್ ಕಂಪನಿಗಳ ಪರವಾಗಿದೆ ಎಂದು ಆರೋಪಿಸಿದರು.

ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇತಿಹಾಸದಲ್ಲಿ ರೈತರು ಕೈಗೊಂಡ ಮಹತ್ವ ಪೂರ್ಣ ಪ್ರತಿಭಟನೆ ಇದು. ಈಗಾಗಲೇ ಪ್ರತಿಭಟನೆಯಲ್ಲಿ 32 ರೈತರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆದಷ್ಟು ಬೇಗ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ರೈತರ ಹೋರಾಡ ಹೀಗೆ ಮುಂದುವರೆದರೆ ಕೇರಳದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಬೇರೆ ರಾಜ್ಯಗಳಿಂದ ಆಹಾರ ಪದಾರ್ಥಗಳ ಪೂರೈಕೆ ನಿಂತರೆ ಕೇರಳ ಉಪವಾಸ ಬೀಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss