spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೇಂದ್ರ ಕೃಷಿ ಸಚಿವ ತೋಮರ್‍ ಅವರನ್ನು ಭೇಟಿ ಮಾಡಿದ ರಾಜ್ಯ ಮೀನುಗಾರಿಕಾ ಸಚಿವ ಕೋಟ

- Advertisement -Nitte

ಉಡುಪಿ: ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತು ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‍ ಅವರನ್ನು ದಿಲ್ಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.
ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ, ಕಾರವಾರದ ಮಾವಾಳಿ ಹಾಗೂ ಮಂಗಳೂರಿನ ಬೈಕಂಪಾಡಿಯಲ್ಲಿ ಸಂಯೋಜಿತ ಸೀ ಫುಡ್ ಪಾರ್ಕ್ ಯೋಜನೆಗಳು.
ರಾಜ್ಯ ಕರಾವಳಿಯ 8 ಮೀನುಗಾರಿಕಾ ಬಂದರುಗಳ ಆಧುನೀಕರಣ ಹಾಗೂ 16 ಕಡೆಗಳಲ್ಲಿ ಮೀನುಗಾರಿಕಾ ಇಳಿದಾಣಗಳ ಉನ್ನತೀಕರಣ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವಂತೆ ಕೇಂದ್ರ ಕೃಷಿ ಸಚಿವರನ್ನು ಮನವಿ ಮಾಡಿದರು.
ಯೋಜನಾ ವರದಿಗಳನ್ನು ಪರಿಶೀಲಿಸಿದ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್‍ ಅವರು, ಧನಾತ್ಮಕವಾಗಿ ಸ್ಪಂದಿಸಿದರು. ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನ ಮಾಡುವಂತೆ ಹಾಗೂ ಪ್ರಧಾನ ಮಂತ್ರಿಯವರ ಆತ್ಮ ನಿರ್ಭರ ಭಾರತ ಯೋಜನೆಯನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಆರ್.ಕೆ.ವಿ.ವೈ. ಮುಖಾಂತರ ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಾಚಾರಿ ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss