ಹೊಸದಿಲ್ಲಿ: ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂದು(ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಗೃಹ ಸಚಿವರ ಆರೋಗ್ಯ ಸ್ಥಿರವಾಗಿದ್ದು, ಸಾಮಾನ್ಯ ತಪಾಸನೆ ಬಳಿಕ ಅಮಿತ್ ಶಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಇನ್ನು ಏಮ್ಸ್ನಿಂದ ಬಿಡುಗಡೆಯಾಗಿರುವ ಅಮಿತ್ ಶಾ, ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನದ ಕಲಾಪದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.
ವಾರಾಂತ್ಯದಲ್ಲಿ ವಿಶ್ರಾಂತಿ ಪಡೆಯಲಿರುವ ಅಮಿತ್ ಶಾ, ಸೋಮವಾರದಿಂದ ಕಲಾಪದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಆಪ್ತ ಮೂಲಗಳು ತಿಳಿಸಿವೆ.