ಹೊಸ ದಿಗಂತ ವರದಿ, ಮಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ
ಬಜೆಟ್ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದ್ದು, ಈ ಬಜೆಟ್ನ್ನು ಸ್ವಾಗತಿಸುತ್ತೇವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಜೆಟ್ ಮೂಲಕ ಕೇಂದ್ರ ಸರಕಾರ 34,83,236 ಕೋ.ರೂ.ಗಳ ವಿವಿಧ ಕ್ಷೇತ್ರಗಳಡಿ ವ್ಯಯಿಸಲು ಉದ್ದೇಶ
ಬಜೆಟ್ ಮೂಲಕ ಕೇಂದ್ರ ಸರಕಾರವು 34,83,236 ಕೋಟಿ ರೂಪಾಯಿಗಳನ್ನು ವಿವಿಧ ಕ್ಷೇತ್ರಗಳಡಿ ವ್ಯಯಿಸಲು ಉದ್ದೇಶಿಸಿದೆ. ಉತ್ಪಾದನೆ ಹೆಚ್ಚಳದ ಮೂಲಕ ಭಾರತವನ್ನು 2025ರ ವೇಳೆಗೆ 5 ಟ್ರಿಲಿಯನ್ ಆರ್ಥಿಕ ವ್ಯವಸ್ಥೆಯತ್ತ ಒಯ್ಯವ ಗುರಿಯನ್ನು ಬಜೆಟ್ ಹೊಂದಿದೆ. ಕೃಷಿ ಉತ್ಪಾದನೆ ಪ್ರಮಾಣ ಹೆಚ್ಚಳ, ಮೂಲಸೌಕರ್ಯ ಹೆಚ್ಚಳ, ಆರೋಗ್ಯ ಕ್ಷೇತ್ರದಲ್ಲಿ ಸೌಕರ್ಯ ವೃದ್ಧಿಗೆ ಇದು ಪೂರಕ ಎನಿಸಲಿದೆ. ಮೂಲಸೌಕರ್ಯಕ್ಕೆ ಗರಿಷ್ಠ ಒತ್ತನ್ನು ನೀಡಲಾಗಿದೆ. ಕೃಷಿ ಮೂಲಸೌಕರ್ಯಕ್ಕೆ 1 ಲಕ್ಷ ಕೋಟಿ ರೂ. ಖರ್ಚು ಮಾಡಲಾಗುವುದು. ವಿವಿಧ ಕ್ಷೇತ್ರಗಳ ಮೂಲಸೌಕರ್ಯ ವೃದ್ಧಿಗೆ ಒಟ್ಟಾಗಿ ಮುಂದಿನ 5 ವರ್ಷಗಳಲ್ಲಿ 100 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
2.8 ಲಕ್ಷ ಉದ್ಯೋಗವಕಾಶ
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೂ ಅನೇಕ ಕೊಡುಗೆ ದೊರೆತಿದೆ. 2021-22ರಲ್ಲಿ ಕರ್ನಾಟಕದಲ್ಲಿ 1,16,144 ಕೋಟಿ ರೂ.ನ ಮೂಲ ಸೌಕರ್ಯ ವ್ಯವಸ್ಥೆ ನಿರ್ಮಾಣ, 2ನೇ ಹಂತದ ಬೆಂಗಳೂರು ಮೆಟ್ರೋ ನಿರ್ಮಾಣ ಕಾಮಗಾರಿಗೆ 14,788 ಕೋ ರೂ. ಬಿಡುಗಡೆ, ಬೆಂಗಳೂರು ಉಪನಗರ ಯೋಜನೆಗೆ 23,093 ಕೋಟಿ ರೂ ಬಿಡುಗಡೆ, ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ 4,870 ಕೋಟಿ ರೂಪಾಯಿ ಅನುದಾನ ಬಿಡುಗಡೆ, ತುಮಕೂರು 7,725 ಕೋಟಿ ರೂ. ವೆಚ್ಚzಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣ. ಈ ಮೂಲಕ 2.8 ಲಕ್ಷ ಉದ್ಯೋಗವಕಾಶ ಲಭಿಸಲಿದೆ. ಅಮೆರಿಕದ ಸಂಸ್ಥೆಯಾದ ಟೆಸ್ಲಾವು ಎಲೆಕ್ಟ್ರಿಕಲ್ ಕಾರು ಉತ್ಪಾದನಾ ಘಟಕವನ್ನು ಕರ್ನಾಟಕದಲ್ಲಿ ತೆರೆಯಲಿದೆ.
ಕೊಚ್ಚಿ-ಮಂಗಳೂರು ಗ್ಯಾಸ್ ಪೈಪ್ಲೈನ್ ಲೋಕಾರ್ಪಣೆ
ಕೊಚ್ಚಿ-ಮಂಗಳೂರು ಗ್ಯಾಸ್ ಪೈಪ್ಲೈನ್ ಲೋಕಾರ್ಪಣೆ ಮಾಡಲಾಗಿದೆ. ಉತ್ತರಕರ್ನಾಟಕದ ಭಾಗದಲ್ಲಿ 21,000 ಕೋಟಿ ರೂ.ವೆಚ್ಚದಲ್ಲಿ 113 ಹೆದ್ದಾರಿ ನಿರ್ಮಾಣದ ಯೋಜನೆಗೆ ಅಸ್ತು. ಬೆಂಗಳೂರು- ಮಂಗಳೂರಿಗೆ ಸಂಪರ್ಕ ಕೊಂಡಿಯಾಗಿರುವ ಶಿರಾಡಿಯ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ. ಒಟ್ಟು 13 ಕಿ.ಮೀ ಉದ್ದದ 6 ಸುರಂಗ ಮಾರ್ಗ. 1.5 ಕಿ.ಮೀ ಉದ್ದದ 10 ಸೇತುವೆಗಳ ವೆಚ್ಚ 10,000 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಶಾಸಕ ಡಾ. ವೈ. ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಉಪಾಧ್ಯಕ್ಷ ಸತೀಶ್ ಕುಂಪಲ, ವಕ್ತಾರರಾದ ರವಿಶಂಕರ ಮಿಜಾರು, ರಾಧಾಕೃಷ್ಣ, ಪ್ರಮುಖರಾದ ಸಂದೇಶ್ ಶೆಟ್ಟಿ