Sunday, July 3, 2022

Latest Posts

ಕೇಂದ್ರ ಬಜೆಟ್: ಪ್ರತಿ ಮುದ್ರಣ ಕಾರ್ಯ ಆರಂಭಕ್ಕೂ ಮುನ್ನ ನಾಳೆ ಹಲ್ವಾ ಕಾರ್ಯಕ್ರಮ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಫೆಬ್ರವರಿ 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮುನ್ನ 2021-22ರ ಕೇಂದ್ರ ಬಜೆಟ್‌ನ ದಾಖಲೆಗಳನ್ನು ಮುದ್ರಿಸುವ ಪ್ರಕ್ರಿಯೆಯ ‘ಹಲ್ವಾ ಕಾರ್ಯಕ್ರಮ’ಕ್ಕೆ ಜನವರಿ 22ರಂದು ಚಾಲನೆ ನೀಡಲಿದ್ದಾರೆ.
ಕೇಂದ್ರ ಬಜೆಟ್ ಮಂಡಿಸುವ ಮುನ್ನ ದಾಖಲೆಗಳನ್ನು ಮುದ್ರಿಸುವ ಪ್ರಕ್ರಿಯೆಯ ವಾಡಿಕೆಯ ಹಲ್ವಾ ಸಮಾರಂಭವನ್ನು ಹಣಕಾಸು ಸಚಿವಾಲಯ ಶನಿವಾರ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ, ಅನುರಾಗ್ ಠಾಕೂರ್, ಹಣಕಾಸು ಸಚಿವಾಲಯದ ಕಾರ್ಯದರ್ಶಿಗಳು ಮತ್ತು ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಸಮಾರಂಭದ ಬಳಿಕ ಬಜೆಟ್ ತಯಾರಿಕೆಯ ಪ್ರಕ್ರಿಯೆಯಲ್ಲಿ ಭಾಗವಾಗಿರುವ ನೌಕರರು ಸುಮಾರು 10 ದಿನಗಳವರೆಗೆ ನಾರ್ತ್ ಬ್ಲಾಕ್‌ನ ನೆಲಮಾಳಿಗೆಗೆ ತೆರಳುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಹಿ ವಿತರಣೆಯ ಬಳಿಕ ಬಜೆಟ್‌ ಪ್ರಕ್ರಿಯೆಯಲ್ಲಿ ನೇರವಾಗಿ ತೊಡಗಿಸಿಕೊಳ್ಳುವ ಹಾಗೂ ಸಹಕರಿಸುವ ಸಿಬ್ಬಂದಿ ಲೋಕಸಭೆಯಲ್ಲಿ ಬಜೆಟ್‌ ಮಂಡನೆಯಾಗುವ ತನಕ ಹಣಕಾಸು ಸಚಿವಾಲಯದಲ್ಲಿಯೇ ಉಳಿದುಕೊಳ್ಳಬೇಕಾಗುತ್ತದೆ. ಕುಟುಂಬದ ಜತೆಗಿನ ಸಂಪರ್ಕವನ್ನು ಕಡಿದುಕೊಳ್ಳಬೇಕಾಗುತ್ತದೆ. ಬಜೆಟ್‌ನ ಗೌಪ್ಯತೆಯನ್ನು ರಕ್ಷಿಸಲು ಈ ಪದ್ಧತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss