Saturday, August 13, 2022

Latest Posts

ಕೇಂದ್ರ ಸಚಿವರಾದ ಸುರೇಶ್ ಅಂಗಡಿ ನಿಧನ: ಬಳ್ಳಾರಿ ಬಿಜೆಪಿ ಕಚೇರಿಯಲ್ಲಿ ಸಂತಾಪ ಸಭೆ

ಬಳ್ಳಾರಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾದ ಹಿನ್ನೆಲೆ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗುರುವಾರ ಸಂತಾಪ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ನೆರೆದ ಗಣ್ಯರು ಸಚಿವ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ‌ ಸಲ್ಲಿಸುವ ಮೂಲಕ ಸಂತಾಪ ಸೂಚಿಸಿದರು.
ಕೇಂದ್ರ ಸಚಿವರಾದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಗಣ್ಯರು ಪ್ರಾರ್ಥಿಸಿದರು. ಇದಕ್ಕೂ ಮುನ್ನ ಕಚೇರಿಯಲ್ಲಿ ಕೆಲಕಾಲ ಮೌನಾಚರಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಡಾ. ಅರುಣಾ, ಬಳ್ಳಾರಿ ನಗರ ಪ್ರಧಾನ ಕಾರ್ಯದರ್ಶಿ ಕೆ. ರಾಮಾಂಜನಿ, ಕೆ.ಎಸ್. ಅಶೋಕ್ ಕುಮಾರ್, ಹಿರಿಯ ಮುಖಂಡರಾದ ಸುಬ್ಬರಾವ್ ,ರಾಮಚಂದ್ರಪ್ಪ, ಮಹಾನಗರ ಪಾಲಿಕೆ ಸದಸ್ಯ ಎಸ್ .ಮಲ್ಲನಗೌಡ, ಬಾಲಚಂದ್ರ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಓಂ ಪ್ರಕಾಶ್, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಅಗಲಿದ ನಾಯಕನ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss