Saturday, August 13, 2022

Latest Posts

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಮೈಸೂರು: ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಹಾಗೂ ದೇಶ ಮತ್ತೊಬ್ಬ ಧೀಮಂತ ಹಾಗೂ ಸರಳ ಸಜ್ಜನ ರಾಜಕಾರಣಿಯೊಬ್ಬರನ್ನು ಕಳೆದುಕೊಂಡAತಾಗಿದೆ. ಜನತೆಯ ಬಗ್ಗೆ ಉತ್ತಮ ಕಾಳಜಿಯನ್ನು ಹೊಂದಿದ್ದ ಸುರೇಶ್ ಅಂಗಡಿಯವರು, ಕೇಂದ್ರದಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ರಾಜ್ಯಕ್ಕೆ ಅನೇಕ ರೈಲ್ವೆ ಯೋಜನೆಗಳನ್ನು ತರುವ ಕನಸನ್ನು ಹೊಂದಿದ್ದರು.
ಇದರ ಜೊತೆಗೆ ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮವನ್ನು ವಹಿಸಿದ್ದರು. ಅಲ್ಲದೆ, ಕೋವಿಡ್ ೧೯ ರ ಸಂಕಷ್ಟದ ಕಾಲದಲ್ಲೂ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಕೇಂದ್ರದಿoದ ಮೈಸೂರಿನ ಕೋವಿಡ್ ಮೇಲುಸ್ತುವಾರಿ ವಹಿಸಿಕೊಂಡು ಹಲವು ಸಲಹೆ ಸೂಚನೆಗಳನ್ನು ನೀಡಿದ್ದರು. ಇವರ ಈ ಅಕಾಲಿಕ ನಿಧನ ಬಹಳ ನೋವು ತಂದಿದೆ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss