ಬೆಂಗಳೂರು: ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ಸಿಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ಸಿಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕರಾಗಿದ್ದಾರೆ. ಜಿ.ಎಸ್.ಟಿ ಪಾಲು, ನೆರೆ ಪರಿಹಾರ ಮುಂತಾದ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ನೆರವು ಸಿಗುತ್ತಿಲ್ಲ.
ರಾಜ್ಯದ 25 ಬಿಜೆಪಿ ಸಂಸದರು ಮೋದಿ ಎದುರು ಮಾತನಾಡುತ್ತಿಲ್ಲ. ಸಿಎಂಗೆ ಸಹಕಾರ ನೀಡದೇ ರಾಜ್ಯಕ್ಕೆ ದ್ರೋಹ ಬಗೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ಸಿಗದೇ ಮುಖ್ಯಮಂತ್ರಿ @BSYBJP ಅಸಹಾಯಕರಾಗಿದ್ದಾರೆ.
ಜಿ.ಎಸ್.ಟಿ ಪಾಲು, ನೆರೆ ಪರಿಹಾರ ಮುಂತಾದ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ನೆರವು ಸಿಗುತ್ತಿಲ್ಲ.
ರಾಜ್ಯದ 25 ಬಿಜೆಪಿ ಸಂಸದರು ಮೋದಿ ಎದುರು ಮಾತನಾಡುತ್ತಿಲ್ಲ. ಸಿಎಂಗೆ ಸಹಕಾರ ನೀಡದೇ ರಾಜ್ಯಕ್ಕೆ ದ್ರೋಹ ಬಗೆಯುತ್ತಿದ್ದಾರೆ.
– @DKShivakumar pic.twitter.com/iYDuOFavhX— D K Shivakumar, President, KPCC (@KPCCPresident) September 19, 2020