Wednesday, August 10, 2022

Latest Posts

ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ:  ಅರಬ್ಬಿ ಸಮುದ್ರದಲ್ಲಿ ಏಳಲಿವೆ ಭಾರೀ ಗಾತ್ರದ ಅಲೆಗಳು!

ಉಡುಪಿ: ಕರ್ನಾಟಕದ ಕರಾವಳಿಯ ಸಮುದ್ರದಲ್ಲಿ ಮುಂದಿನ 40 ತಾಸುಗಳಲ್ಲಿ ಭಾರೀ ಗಾತ್ರದ ಅಲೆಗಳು ಏಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಆದ್ದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಚ್ಚರಿಸಿದೆ.
ಭಾರತೀಯ ಹವಾಮಾನ ಇಲಾಖೆಯ ತಿರುವನಂತಪುರ ಕೇಂದ್ರವು ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ, ಆ. 7ರ ರಾತ್ರಿ 11.30ರ ವರೆಗೆ ಅರಬ್ಬಿ ಸಮುದ್ರದಲ್ಲಿ 3.5ರಿಂದ 5.7 ಮೀಟರ್ ಎತ್ತರದ ಭಾರೀ ಗಾತ್ರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮಂಗಳೂರಿನಿಂದ ಕಾರವಾರದವರೆಗಿನ ಕರ್ನಾಟಕ ಕರಾವಳಿಯಲ್ಲಿ ಒಂದು ತಾಸಿಗೆ 50-60 ಕಿ.ಮೀ. ವೇಗದಲ್ಲಿ ಬಲವಾಗಿ ಗಾಳಿ ಬೀಸಲಿದೆ. ಆದ್ದರಿಂದ ಮೀನುಗಾರಿಕೆಗೆಂದು ಸಮುದ್ರಕ್ಕೆ ಯಾವುದೇ ಮೀನುಗಾರರು ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಿದೆ.
ಕೇಂದ್ರ ಹವಾಮಾನ ಇಲಾಖೆಯ ವರದಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಮುದ್ರ ತೀರ ಮತ್ತು ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಅಲ್ಲದೇ ಜಿಲ್ಲೆಯ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಡಳಿತ ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss