Sunday, June 26, 2022

Latest Posts

ಕೇರಳದಲ್ಲಿ ದೌರ್ಜನ್ಯಗಳಿಗೆ ತುತ್ತಾದ ಮಕ್ಕಳು, ಮಹಿಳೆಯರಿಗೆ ಉಚಿತ ಟ್ಯಾಕ್ಸಿ ಯೋಜನೆ

ಹೊಸ ದಿಗಂತ ವರದಿ, ಕಾಸರಗೋಡು:

ಕೇರಳದಲ್ಲಿ ಅಕ್ರಮಗಳಿಗೆ ಅಥವಾ ದೌರ್ಜನ್ಯಗಳಿಗೆ ತುತ್ತಾದ ಮಹಿಳೆಯರು ಮತ್ತು ಮಕ್ಕಳಿಗೆ ಸಹಾಯ ಮಾಡಲು ರಾಜ್ಯ ಸರಕಾರವು ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಅಂತಹ ಸಂತ್ರಸ್ತರಿಗೆ ಟ್ಯಾಕ್ಸಿ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವಂತೆ ಆದೇಶ ಹೊರಡಿಸಲಾಗಿದೆ. ಆರೋಗ್ಯ , ಸಾಮಾಜಿಕ ನ್ಯಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಕೆ.ಕೆ.ಶೈಲಜಾ ಟೀಚರ್ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂಸಾಚಾರದಲ್ಲಿ ತೊಂದರೆಗೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಪ್ರಥಮ ಹಂತದಲ್ಲಿ ತಿರುವನಂತಪುರ ಹಾಗೂ ಎರ್ನಾಕುಳಂ ಜಿಲ್ಲೆಗಳಲ್ಲಿ ವಿವಿಧ ಮಾನಸಿಕ, ವೈದ್ಯಕೀಯ ಮತ್ತು ಕಾನೂನು ಉದ್ದೇಶಗಳಿಗಾಗಿ ಹಾಗೂ ಇನ್ನಿತರ ಅಗತ್ಯಗಳಿಗೆ ಹೋಗಿ ಬರಲು ಉಚಿತ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಅದರಂತೆ ಕೆಲವು ಟ್ಯಾಕ್ಸಿಗಳಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಖರ್ಚು ವೆಚ್ಚಗಳನ್ನು ಸರಕಾರವೇ ಭರಿಸಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಕೋರಿಕೆಯ ಮೇರೆಗೆ ಈ ಯೋಜನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಮಧ್ಯೆ ಕೋವಿಡ್ ವ್ಯಾಕ್ಸಿನೇಷನ್ ಗಾಗಿ ಆರೋಗ್ಯ ಕಾರ್ಯಕರ್ತರ ನೋಂದಣಿ ಕಾರ್ಯವು ಅಂತಿಮ ಹಂತದಲ್ಲಿದೆ ಎಂದು ಕೆ.ಕೆ.ಶೈಲಜಾ ಟೀಚರ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss