Wednesday, August 17, 2022

Latest Posts

ಕೇರಳದಲ್ಲಿ ‘ಬೆಂಗಳೂರು ಸರಣಿ ಬಾಂಬ್ ಸ್ಫೋಟ’ದ ಶಂಕಿತ ಉಗ್ರನ ಬಂಧನ!

ಬೆಂಗಳೂರು: 2008ರಲ್ಲಿ ಬೆಂಗಳೂರು ಸರಣಿ ಬಾಂಬ್ ಸ್ಫೋಟಕ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿದ್ದಂತ ಶಂಕಿತ ಉಗ್ರರನ್ನು 12 ವರ್ಷಗಳ ಬಳಿಕ ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣ ಬಳಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಬೆಂಗಳೂರು ಸರಣಿ ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈತನ ಬಗ್ಗೆ ಕಳೆದ ವರ್ಷ ನಮಗೆ ಮಾಹಿತಿ ಸಿಕ್ಕಿತ್ತು. ಈ ಆಧಾರದ ಮೇಲೆ ಎಲ್ಲಾ ಕಡೆ ರೆಡ್ ‌ಕಾರ್ನರ್ ನೋಟಿಸ್ ಜಾರಿ ಮಾಡಿದ್ದೆವು. ನಿನ್ನೆ ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣ ಬಳಿ ಈತ ಬಂದಾಗ ಕೇಂದ್ರ ತನಿಖಾ ದಳದ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದೇವೆ ಎಂದು ತಿಳಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!