Thursday, August 11, 2022

Latest Posts

ಕೇರಳದಲ್ಲಿ ಮಂಗಳವಾರ 7354 ಮಂದಿಗೆ ಕೊರೋನಾ ಸೋಂಕು: 3420 ಜನರಿಗೆ ಗುಣಮುಖ

ಕಾಸರಗೋಡು: ಕೇರಳ ರಾಜ್ಯದಲ್ಲಿ ಮಂಗಳವಾರ 7354 ಜನರಿಗೆ ಕೋವಿಡ್ ಖಚಿತವಾಗಿದೆ. 3420 ಜನರನ್ನು ಗುಣಪಡಿಸಲಾಗಿದೆ. ಒಟ್ಟು 22 ಮಂದಿಯ ಸಾವಿಗೆ ಕೋವಿಡ್ ಮೂಲವೆಂದು ತಿಳಿಸಲಾಗಿದೆ. 670 ಮಂದಿಗಳ ಸೋಂಕಿನ ಮೂಲ ಸ್ಪಷ್ಟವಾಗಿಲ್ಲ.
ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುವನಂತಪುರದಲ್ಲಿ ಎಚ್ಚರಿಸಿದ್ದಾರೆ. ಅಕ್ಟೋಬರ್ ಮಧ್ಯದ ವೇಳೆಗೆ ರಾಜ್ಯದಲ್ಲಿ ಕೋವಿಡ್ ಏಕಾಏಕಿ ತೀವ್ರಗೊಳ್ಳಲಿದೆ ಎಂದು ಅವರು ಹೇಳಿದರು. ಪ್ರಕರಣಗಳ ಸಂಖ್ಯೆ ದಿನಕ್ಕೆ 15,000 ಕ್ಕೆ ಏರಿಕೆಯಾಗಲಿದೆ ಎಂದು ಸಿಎಂ ತಿಳಿಸಿದರು. ಕೋವಿಡ್ ಹರಡುವಿಕೆ ತೀವ್ರಗೊಳ್ಳುತ್ತಿರುವ ಪರಿಸ್ಥಿತಿಯತ್ತ ರಾಜ್ಯ ಸಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಜನಸೇರುವಂತಹ ಪ್ರತಿಭಟನೆಗಳನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು. ಪ್ರಸ್ತುತ 61791 ಜನರು ಚಿಕಿತ್ಸೆಯಲ್ಲಿದ್ದಾರೆ. 130 ಆರೋಗ್ಯ ಕಾರ್ಯಕರ್ತರು ಸೋಂಕಿಗೊಳಗಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss