Thursday, August 11, 2022

Latest Posts

ಕೇರಳದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಸೆಕ್ಷನ್ 144 ಜಾರಿ: ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವಂತಿಲ್ಲ

ಕಾಸರಗೋಡು: ಕೇರಳದಲ್ಲಿ ಕೋವಿಡ್-19 ವೈರಸ್ ಸೋಂಕು ವ್ಯಾಪಕವಾಗಿ ಹರಡಿದ ಮತ್ತು ಹರಡುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 3 ರಿಂದ 31ರ ವರೆಗೆ ಐದಕ್ಕಿಂತ ಹೆಚ್ಚು ಜನರು ಏಕಕಾಲಕ್ಕೆ ಗುಂಪು ಸೇರುವುದನ್ನು ರಾಜ್ಯದಾದ್ಯಂತ ನಿಷೇಧಿಸಿ ಸರಕಾರವು ಆದೇಶ ಹೊರಡಿಸಿದೆ. ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ಈ ನಿಷೇಧ ಜಾರಿಗೊಳಿಸಲಾಗಿದೆ.
ಅಲ್ಲದೆ ಜಿಲ್ಲಾ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಪರಿಸ್ಥಿತಿಯನ್ನು ನಿರ್ಣಯಿಸಬಹುದು ಮತ್ತು ಕಾಲಕ್ಕೆ ಅನುಗುಣವಾಗಿ ಅಗತ್ಯದ ಕ್ರಮ ತೆಗೆದುಕೊಳ್ಳಬಹುದು. ಈ ಬಗ್ಗೆ ಸಂಪೂರ್ಣ ಹೊಣೆಗಾರಿಕೆಯನ್ನು ರಾಜ್ಯದ ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ಇದೇ ವೇಳೆ ವಿವಾಹ ಸಮಾರಂಭ (50 ಮಂದಿ ಮಾತ್ರ) ಹಾಗೂ ಶವ ಸಂಸ್ಕಾರ (20 ಮಂದಿ ಮಾತ್ರ) ಕಾರ್ಯಕ್ರಮಗಳಿಗೆ ಸಂಬಂಧಿಸಿ ಈ ಹಿಂದಿನ ಆದೇಶವೇ ಜಾರಿಯಲ್ಲಿರುತ್ತದೆ. ಅಂತಹ ಕಡೆಗಳಲ್ಲಿ ಹೊಸ ನಿಯಂತ್ರಣ ಬಾಧಕವಲ್ಲ. ಸಾರ್ವಜನಿಕವಾಗಿ ಜನ ಸಂಪರ್ಕದ ಮೂಲಕ ವ್ಯಾಪಕವಾಗಿ ಕೊರೋನಾ ಹರಡುವುದನ್ನು ತಡೆಗಟ್ಟಲು ಈ ನೂತನ ನಿಬಂಧನೆಯನ್ನು ಜಾರಿಗೆ ತರಲಾಗಿದೆ ಎಂದು ರಾಜ್ಯ ಸರಕಾರವು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss