Tuesday, June 28, 2022

Latest Posts

ಮಂಗಳೂರಿಗೆ ಮತ್ತೆ ಕೊರೋನಾಘಾತ: ಕೇರಳ ಮೂಲದ 15 ವಿದ್ಯಾರ್ಥಿಗಳಲ್ಲಿ ವೈರಸ್ ಪತ್ತೆ

ಹೊಸದಿಗಂತ ವರದಿ,ಮಂಗಳೂರು:

ರೂಪಾಂತರಿ ಕೊರೋನಾ ಭೀತಿ ನಡುವೆ ಕೇರಳ ಕಾಸರಗೋಡು ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದೆ. ಇದರ ಬಿಸಿ ಮಂಗಳೂರಿಗೂ ತಟ್ಟಿದೆ.

ಕೇರಳ ಮತ್ತು ಕಾಸರಗೋಡಿನಿಂದ ಹೆಚ್ಚಿನ ವಿದ್ಯಾರ್ಥಿಗಳು ಮಂಗಳೂರಿಗೆ ಶಿಕ್ಷಣ ಹಾಗೂ ಉದ್ಯೋಗ ನಿಮಿತ್ತ ಆಗಮಿಸುತ್ತಿದ್ದಾರೆ. ಕೇರಳದಿಂದ ಮಂಗಳೂರಿಗೆ ಆಗಮಿಸಿದ 15 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಇರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದೆ.

ಮಾರ್ಗಸೂಚಿ ಉಲ್ಲಂಘನೆ ಕಾರಣ:  ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಂಗಳೂರಿನ ಎರಡು ಖಾಸಗಿ ನರ್ಸಿಂಗ್ ಕಾಲೇಜುಗಳು ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಎರಡು ನರ್ಸಿಂಗ್ ಕಾಲೇಜುಗಳು ಕೇರಳದ ಸುಮಾರು 600 ವಿದ್ಯಾರ್ಥಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ದಾಖಲಾತಿ ಮಾಡಿಕೊಂಡಿದ್ದು, ಈ ಪೈಕಿ15 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ.

ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಬಗ್ಗೆ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಿರಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿತ್ತು. ಈ ವೇಳೆ ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ನರ್ಸಿಂಗ್ ಕಾಲೇಜುಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss