Tuesday, July 5, 2022

Latest Posts

ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣ: ಆರೋಪಿಗಳಿಂದ 1.85 ಕೋಟಿ ವಶ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು(ಇ.ಡಿ),ಪ್ರಕರಣದ ಆರೋಪಿಗಳ ಖಾತೆಯಲ್ಲಿ ದೊರೆತ 1.85 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.
ಜುಲೈ 5ರಂದು ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲ್ಫ್‌ನಿಂದ ಬಂದ ಏರ್‌ ಕಾರ್ಗೊದಲ್ಲಿದ್ದ ಬ್ಯಾಗ್ ಒಂದರಲ್ಲಿ 15 ಕೋಟಿ ಮೌಲ್ಯದ 30 ಕೆ.ಜಿ. ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಪ್ರಕರಣ ಸಂಬಂಧ ಮನಿ ಲಾಂಡರಿಂಗ್ ( ಅಕ್ರಮ ಹಣ ವರ್ಗಾವಣೆ) ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧನವಾಗಿರುವ ಸ್ವಪ್ನಾ ಸುರೇಶ್, ಸರಿತ್ ಪಿಎಸ್ ಮತ್ತು ಸಂದೀಪ್ ನಾಯರ್​ರಿಂದ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಈ ಸಂಬಂಧ ಅಮಾನತುಗೊಂಡು ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಅವರ ಎಲ್ಲ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಕ್ರಮ ಕೈಗೊಂಡಿರುವುದಾಗಿ ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss