Sunday, June 26, 2022

Latest Posts

ಕೇರಳ ರಾಜ್ಯದಲ್ಲಿ ಸೋಮವಾರ ಆರು ಮಂದಿಗೆ ಕೊರೊನಾ ವೈರಸ್ ಸೋಂಕು

ಕಾಸರಗೋಡು: ಕೇರಳ ರಾಜ್ಯದಲ್ಲಿ ಸೋಮವಾರ ಒಟ್ಟು ಆರು ಮಂದಿಗೆ ಕೊರೊನಾ ವೈರಸ್ ಸೋಂಕು ಬಾಧಿಸಿದೆ. ಈ ಆರು ಮಂದಿ ಕಣ್ಣೂರು ಜಿಲ್ಲೆಯವರು. ಇವರಲ್ಲಿ ಐವರು ವಿದೇಶದಿಂದ ಬಂದವರು ಹಾಗು ಒಬ್ಬರಿಗೆ ಸಂಪರ್ಕದಿಂದ ರೋಗ ಬಾಧಿಸಿದೆ. ರಾಜ್ಯದಲ್ಲಿ 21 ಮಂದಿ ಗುಣಮುಖರಾಗಿದ್ದು, ಅವರಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 19 ಮಂದಿ ಮತ್ತು ಆಲಪ್ಪುಳ ಜಿಲ್ಲೆಯಲ್ಲಿ ಇಬ್ಬರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೆ ಒಟ್ಟು 408 ಮಂದಿಗೆ ಕೊರೊನಾ ವೈರಸ್ ಸೋಂಕು ಬಾ„ಸಿದೆ. ರಾಜ್ಯದಲ್ಲಿ ಒಟ್ಟು 292 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 114 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 46323 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 45925 ಮಂದಿ ಮನೆಗಳಲ್ಲೂ, 398 ಮಂದಿ ಆಸ್ಪತ್ರೆಗಳಲ್ಲೂ ನಿಗಾದಲ್ಲಿದ್ದಾರೆ. ಸೋಮವಾರ ವಿವಿಧ ಆಸ್ಪತ್ರೆಗಳಿಗೆ 62 ಮಂದಿಯನ್ನು ದಾಖಲಿಸಲಾಗಿದೆ. ಇದು ವರೆಗೆ ರಾಜ್ಯದಲ್ಲಿ 19756 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ ಲಭ್ಯ 19074 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ.
ಆಸ್ಪತ್ರೆಗಳಲ್ಲಿ ಕ್ವಾರಂಟೈನ್‍ನಲ್ಲಿರುವ ಸರ್ವರನ್ನೂ ಪರೀಕ್ಷೆಗೊಳಪಡಿಸಲಾಗುವುದು. ಈ ಪ್ರಕ್ರಿಯೆ 2-3 ದಿನಗಳಲ್ಲಿ ಪೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss