ಕಾಸರಗೋಡು: ಕೋವಿಡ್ – 19 ಲಾಕ್ ಡೌನ್ ಕಾರಣದಿಂದಾಗಿ ಬಾಕಿ ಉಳಿದಿರುವ ಕೇರಳ SSLC ಮತ್ತು ಪ್ಲಸ್ ಟು ಪರೀಕ್ಷೆಗಳನ್ನು ಮತ್ತೊಮ್ಮೆ ಮುಂದೂಡಿ ಕೇರಳ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ಈ ಪರೀಕ್ಷೆಗಳು ಜೂನ್ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಸರಕಾರವು ಸೂಚನೆ ನೀಡಿದೆ. ಆದರೆ ಕೇಂದ್ರ ಸರಕಾರದ ಮಾರ್ಗ ನಿರ್ದೇಶನಗಳನ್ನು ಪಾಲಿಸಿಕೊಂಡು ಪರೀಕ್ಷಾ ದಿನಾಂಕ ಪ್ರಕಟಿಸಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ.
ಮೇ 26 ರಿಂದ ಮೂರು ದಿನಗಳ ವರೆಗೆ ಈ ಪರೀಕ್ಷೆಗಳು ನಡೆಯಲಿವೆ ಎಂದು ಈ ಹಿಂದೆ ಎರಡು ಬಾರಿ ಸರಕಾರವು ಪ್ರಕಟಿಸಿತ್ತು. ಆದರೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮತ್ತೊಮ್ಮೆ ಮುಂದೂಡಿ ಆದೇಶಿಸಲಾಗಿದೆ.