Thursday, August 18, 2022

Latest Posts

ಕೈಮೀರಿ ಹೋಗುತ್ತಿರುವ ಪರಿಸ್ಥಿತಿ: ತಮಿಳುನಾಡು ಪ್ರಮುಖ ನಗರಗಳಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್

ಚೆನ್ನೈ: ಕೈಮೀರಿ ಹೋಗುತ್ತಿರುವ ಪರಿಸ್ಥಿತಿ ನಿಯಂತ್ರಣಕ್ಕೆ ಪ್ರಮುಖ ನಗರಗಳಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಹೇರಲು ತಮಿಳುನಾಡು ಸರಕಾರ ಮುಂದಾಗಿದೆ.
ತಮಿಳುನಾಡು ರಾಜಧಾನಿ ಚೆನ್ನೈ, ತಿರುವಳ್ಳೂರ್, ಚೆಂಗಲ್ ಪೇಟ್ ಮತ್ತು ಕಾಂಚಿಪುರಂನಲ್ಲಿ ಸರಕಾರ ಜೂ.19ರಿಂದ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.
ಸೋಂಕಿತರ ಸಂಖ್ಯೆ ಅತೀ ಹೆಚ್ಚಾಗಿರುವ ಚೆನ್ನೈನಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆಯಾಗಿದ್ದು, ಇಲ್ಲಿ ದಿನಸಿ ಅಂಗಡಿ ಮಾತ್ರ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಈ ನಿಯಮ ಜೂನ್ 30ರವರೆಗೂ ಜಾರಿಯಲ್ಲಿರಲಿದೆ. ಬಳಿಕ ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸರಕಾರ ತಿಳಿಸಿದೆ. ಸೋಂಕಿತರ ಸಂಖ್ಯೆ ಕಡಿಮೆ ಇರು, ಸೋಂಕಿತರೇ ಇಲ್ಲದ ಪ್ರದೇಶಗಳಲ್ಲಿ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ.
ತಮಿಳುನಾಡಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ಮದ್ರಾಸ್ ಹೈಕೋರ್ಟ್ ಕೂಡಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣವಾಗಿ ಹಿಂದೆ ಬೀಳುತ್ತಿದೆ ಎಂದು ಛಾಟಿ ಬೀಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!