ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೈಯಲ್ಲಿದ್ದ ಮೊಬೈಲ್’ನ್ನು ಅರೆಕ್ಷಣದಲ್ಲಿ ಕಿತ್ತೊಯ್ಯುತ್ತಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರು ಕಾಮಾಕ್ಷಿಪಾಳ್ಯ ವೃಷಭಾವತಿ ನಗರದ ಜಗದೀಶ್ (20), ಹಾಗೂ ಪ್ರಸನ್ನ (23).
ಆರೋಪಿಗಳಿಂದ 5 ಲಕ್ಷ ಮೌಲ್ಯದ 15 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಆಟೋಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾತ್ರಿಯಾಗುತ್ತಿದ್ದಂತೆಯೇ ಆಟೋಗಳಲ್ಲಿ ಸುತ್ತಾಡುತ್ತಿದ್ದ ಈ ಇಬ್ಬರು ಆರೋಪಿಗಳು ರಸ್ತೆಗಳಲ್ಲಿ, ಮನೆಮುಂದೆ ಮಾತನಾಡುತ್ತ ನಿಂತಿರುವ ವ್ಯಕ್ತಿಗಳನ್ನು ಗುರುತಿಸುತ್ತಿದ್ದರು. ನಂತರ ಆ ವ್ಯಕ್ತಿಗಳ ಬಳಿ ಹೊಗಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಮೊಬೈಲ್ ಮಾರಾಟದಿಂದ ಬಂದ ಹಣವನ್ನು ದುಶ್ಚಟಗಳಿಗೆ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು ಜ.13ರಂದು 70 ಸಾವಿರ ಮೌಲ್ಯದ ಐಫೋನ್ನ್ನು ವ್ಯಕ್ತಿಯೊಬ್ಬರ ಬಳಿಯಿಂದ ಕಿತ್ತೊಯ್ದಿದ್ದರು. ಈ ಕುರಿತು ಪ್ರಕರಣ ದಾಖಲಾಗಿದ್ದು,ವಿಶೇಷ ತಂಡ ತನಿಖೆ ಆರಂಭಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.