Wednesday, July 6, 2022

Latest Posts

ಕೊಡಗಿಗೆ ಬಂದಿಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಹೊಸದಿಗಂತ ವರದಿ, ಕೊಡಗು:

ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಗಮಂಡಲ ಹೆಲಿಪ್ಯಾಡ್ ಗೆ ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಶನಿವಾರ ಆಗಮಿಸಿದರು.

ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ್ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿದ್ದರು.

ಈ ಸಂದರ್ಭ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರೂ ರಾಷ್ಟ್ರಪತಿಯವರ ಜೊತೆ ಆಗಮಿಸಿದರು.

ಭಾಗಮಂಡಲದ ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್ ನಲ್ಲಿ ಬಂದಿಳೊದ ರಾಷ್ಟ್ರಪತಿಯವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.

ಬಳಿಕ ರಾಷ್ಟ್ರಪತಿಯವರು  ತಲಕಾವೇರಿ ದೇವಸ್ಥಾನಕ್ಕೆ ತೆರಳಿದರು. ದೇವಸ್ಥಾನದಲ್ಲಿ  ಪೂಜೆ ಸಲ್ಲಿಸಿದ ಬಳಿಕ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದ ಹೆಲಿಪ್ಯಾಡ್‍ಗೆ ಅವರು ಆಗಮಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss